ADVERTISEMENT

ಆಲೂಗಡ್ಡೆ ಬೆಳೆ ಹಾನಿ: ಪರಿಹಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಜೂನ್ 2013, 8:31 IST
Last Updated 11 ಜೂನ್ 2013, 8:31 IST
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಅಪಾರ ನಷ್ಟ ಅನುಭವಿಸಿರುವ ಆಲೂಗಡ್ಡೆ ಬೆಳೆಗಾರರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಸೋಮವಾರ ಮನವಿ ಸಲ್ಲಿಸಿದರು.

ಬೆಳಗಾವಿ: ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಅಪಾರ ನಷ್ಟವನ್ನು ಅನುಭವಿಸಿರುವ ಆಲೂಗಡ್ಡೆ ಬೆಳೆಗಾರರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು.

ಬೆಳಗಾವಿಗೆ ಸೋಮವಾರ ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದರು.

`ಈ ಕುರಿತು 250ಕ್ಕೂ ಹೆಚ್ಚು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಅಪಾರ ನಷ್ಟ ಅನುಭವಿಸಿರುವ ಆಲೂಗಡ್ಡೆ ಬೆಳೆಗಾರರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಸರ್ಕಾರವು ಈಗ ಪರಿಹಾರ ನೀಡದಿದ್ದರೆ ಆತ್ಮಹತ್ಯೆಯೇ ಗತಿ. ಹೀಗಾಗಿ ಪರಿಸ್ಥಿತಿಯನ್ನು ಅರಿತು ಶೀಘ್ರವೇ ಪರಿಹಾರವನ್ನು ನೀಡಬೇಕು' ಎಂದು ಒತ್ತಾಯಿಸಿದರು.

`333 ರೈತರ ಹೆಸರಿನಲ್ಲಿ ವಿವಿಧ ಸೊಸೈಟಿ ಹಾಗೂ ಬ್ಯಾಂಕ್‌ಗಳಲ್ಲಿ ಇರುವ 3 ಕೋಟಿ ರೂಪಾಯಿ ಸಾಲವನ್ನು ಸರ್ಕಾರವು ಕೂಡಲೇ ಭರಿಸಬೇಕು' ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಸಾಹೇಬ ದೇಸಾಯಿ ಒತ್ತಾಯಿಸಿದರು. ಕೆ.ಬಿ. ಪಾಟೀಲ, ಯಲಗೌಡ ಪಾಟೀಲ, ಬಸವರಾಜ ಪಾಟೀಲ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.