ADVERTISEMENT

ಉಪನ್ಯಾಸಕರ ಪುನರ್‌ಮನನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 7:30 IST
Last Updated 16 ಅಕ್ಟೋಬರ್ 2012, 7:30 IST

ಬೆಳಗಾವಿ: “ಸಂಘಟನೆಯ ಶಕ್ತಿಯಿಂದ ಏನೆಲ್ಲ ಸಾಧಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾ ಪದವಿಪೂರ್ವ ಮಹಾವಿದ್ಯಾಲಯಗಳ ರಾಜ್ಯಶಾಸ್ತ್ರ ಪ್ರಾಚಾರ್ಯ, ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಉತ್ತಮ ಕಾರ್ಯ ಮಾಡುತ್ತಿದ್ದಾರೆ” ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ತೊರವಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಸಂಘದ ವತಿಯಿಂದ ಇಲ್ಲಿನ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಿದ ರಾಜ್ಯಶಾಸ್ತ್ರ ಉಪನ್ಯಾಸಕರ ಪುನರ್‌ಮನನ್ ಹಾಗೂ ಪ್ರತಿಭಾವಂತ, ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸುರೇಶಕುಮಾರ ಉಪನ್ಯಾಸಕರು ಅನುಸರಿಸಬೇಕಾದ ವಿಧಾನಗಳ ಕುರಿತು ಮಾತನಾಡಿದರು.
ಸರ್ಕಾರಿ ಚಿಂತಾಮಣರಾವ್ ಕಾಲೇಜಿನ ಪ್ರಾಚಾರ್ಯ ಎಸ್.ಬಿ.ದೊಡ್ಡಮನಿ, ಆರ್.ಪಿ.ಡಿ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಎಚ್.ಪಾಟೀಲ, ವಿ.ಜಿ.ರಜಪೂತ, ಬಿ.ಕೆ.ಉಳ್ಳಾಗಡಿ, ಎಸ್.ಎಂ.ಶೇಬನ್ನವರ ಉಪಸ್ಥಿತರಿದ್ದರು. ಪ್ರತಿಭಾವಂತ ವಿದ್ಯಾರ್ಥಿ, ಉಪನ್ಯಾಸಕರಿಗೆ, ನಿವೃತ್ತ ಪ್ರಾಚಾರ್ಯರನ್ನು ಸನ್ಮಾನಿಸಲಾಯಿತು.

ಹೇಮಾವತಿ ಸೋನಳ್ಳಿ ಪ್ರಾರ್ಥಿಸಿದರು. ಕೆ.ಡಿ.ವಾಲೀಕಾರ ಸ್ವಾಗತಿಸಿದರು. ಕಾರ್ಯದರ್ಶಿ ಎಸ್.ಕೆ.ರಂಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಎಲಿಷ್ ನಿರೂಪಿಸಿದರು. ಎಸ್.ಎನ್.ನಾಯಕ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.