ADVERTISEMENT

'ಕಲ್ಲೊಳ್ಳಿ ಅಭಿವೃದ್ಧಿಗೆ ₹ 5 ಕೋಟಿ ಮಂಜೂರು'

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2017, 6:48 IST
Last Updated 4 ಡಿಸೆಂಬರ್ 2017, 6:48 IST

ಘಟಪ್ರಭಾ: ಕಲ್ಲೊಳ್ಳಿ ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ₹5 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಕಲ್ಲೋಳಿಯ ಮಾರುತಿ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿಪರ ಕೆಲಸಗಳಿಗೆ ನಾನು ಸದಾ ಸಿದ್ಧನಾಗಿರುವೆ. ಅರಭಾವಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಪ್ರಮುಖ ಗುರಿ ಎಂದರು.

ಮುಂದಿನ ವಿಧಾನಸಭಾ ಚುನಾವಣೆಗೆ 4 ತಿಂಗಳು ಬಾಕಿ ಇದೆ. ಈಗಿನಿಂದಲೇ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಿ, ಮುಂದಿನ ಚುನಾವಣೆಗೆ ಅಣಿಗೊಳಿಸಲಾಗುವುದು ಎಂದು ಹೇಳಿದರು.

ADVERTISEMENT

ದೇವಸ್ಥಾನದ ಸಮಿತಿಯಿಂದ ಬಾಲಚಂದ್ರ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಸುಭಾಸ ಕುರಬೇಟ, ರಾವಸಾಬ ಬೆಳಕೂಡ, ಪ್ರಭಾಶುಗರ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ಅಶೋಕ ಮಕ್ಕಳಗೇರಿ, ಬಸು ದಾಸನವರ, ದತ್ತು ಕಲಾಲ, ಭಗವಂತ ಪತ್ತಾರ ಹಾಗೂ ಶಿವಾನಂದ ಹೆಬ್ಬಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.