ಮುನವಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಯಾದಾಗ ಮಾತ್ರ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಾಧ್ಯ. ಇದಕ್ಕೆ ನಿರಂತರ ಹೋರಾಟದ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಂಚನಗೌಡ ದ್ಯಾಮನಗೌಡರ ಹೇಳಿದರು.
ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಕೈಗೊಂಡಿರುವ ರಥ ಯಾತ್ರೆ ಮುನವಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದರು. ಅನೇಕ ಗ್ರಾಮ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಕುರಿತು ಜನಜಾಗೃತಿ ಜನಸಾಮಾನ್ಯರಿಗೆ ತಲುಪಿ ಅವರು ಸಹ ಈ ಹೋರಾಟದಲ್ಲಿ ಪಾಲ್ಗೊಂಡು ಬಹುನಿರೀಕ್ಷೆಯ ಈ ಯೋಜನೆ ಅನುಷ್ಠಾನಕ್ಕೆ ಬರಬೇಕು ಎಂದು ಒತ್ತಾಯಿಸಿದರು.
ಸೋಮಶೇಖರ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಉಮೇಶ ಬಾಳಿ ಮಾತನಾಡಿದರು. ಸಮಿತಿ ಜಿಲ್ಲಾ ಸಂಚಾಲಕ ಶಿವಾನಂದ ಮೇಟಿ, ನಿಂಗನಗೌಡ ಮಲಗೌಡರ, ಲಕ್ಷ್ಮಣ ಮೊಹರೆ, ಘಟವಾಳಿಮಠ, ಪ್ರಸಾದ ವಿರುಪಯ್ಯನವರಮಠ, ಅಶೋಕ ಹಾದಿಮನಿ, ಬಿಜಲಿ, ಕಾಮಣ್ಣವರ. ಬಿಕ್ಕನಗೌಡರ. ಮೊದಲಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.