ADVERTISEMENT

ಕಾರ್ಮಿಕ ಕಲ್ಯಾಣ ಮಂಡಳಿ ಸೌಲಭ್ಯ ಪಡೆಯಿರಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2012, 7:40 IST
Last Updated 30 ಜುಲೈ 2012, 7:40 IST

ಬೆಳಗಾವಿ: “ಅಸಂಘಟಿತ ಕಾರ್ಮಿಕರು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳುವ ಮೂಲಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿ ರುವ ಧನಸಹಾಯ, ಅಪಘಾತ ಪರಿಹಾರ, ಹೆರಿಗೆ ಸೌಲಭ್ಯ ಸೇರಿದಂತೆ ಮಾಸಿಕ ಪಿಂಚಣಿ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ಹೈಕೋರ್ಟ್ ನ್ಯಾಯ ಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀಧರರಾವ್ ಸಲಹೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಅಸಂಘ ಟಿತ ಕಟ್ಟಡ ಕಾರ್ಮಿಕರಿಗಾಗಿ ಭಾನು ವಾರ ಹಮ್ಮಿಕೊಂಡಿದ್ದ `ಕಾನೂನು ಅರಿವು ಮತ್ತು ನೆರವು~ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.


“ರಾಜ್ಯದಲ್ಲಿ ಸುಮಾರು 7 ಲಕ್ಷ ಅಸಂಘಟಿತ ಕಾರ್ಮಿಕರು ವಿವಿಧ ರಸ್ತೆ, ಕಟ್ಟಡ ನಿರ್ಮಾಣ, ಕೈಗಾರಿಕೆಗಳಲ್ಲಿ ಮತ್ತು ವಿವಿಧ ಕಾಮಗಾರಿಗಳಲ್ಲಿ ತೊಡ ಗಿದ್ದಾರೆ. ಆದರೆ ಇದುವರೆಗೆ 2 ಲಕ್ಷ ಜನ ಮಾತ್ರ ತಮ್ಮ ಹೆಸರನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ಕಲ್ಯಾಣ ಮಂಡಳಿಯ ಸೌಲಭ್ಯಗಳ ಲಾಭ ಪಡೆಯುತ್ತಿದ್ದಾರೆ. ಇನ್ನೂ 5 ಲಕ್ಷ ಕಾರ್ಮಿಕರು ಈ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸಿ ಹೆಸರು ನೋಂದಾಯಿಸಲು ಸಂಬಂಧಪಟ್ಟ ಇಲಾಖೆ ಹಾಗೂ ಗುತ್ತಿಗೆದಾರರು ಮುಂದೆ ಬರಬೇಕು” ಎಂದು ಹೇಳಿದರು.

“ಅಸಂಘಟಿತ ಕಾರ್ಮಿಕರನ್ನು ಸೇವೆಯಲ್ಲಿ ತೊಡಗಿಸಿಕೊಂಡ ಗುತ್ತಿಗೆ ದಾರರಿಂದ ಸರ್ಕಾರಕ್ಕೆ ಶೇ. 1ರಷ್ಟು ಕರ ಸಂಗ್ರಹಿಸಲಾಗುತ್ತದೆ. 5 ವರ್ಷದಲ್ಲಿ ಸುಮಾರು 500 ಕೋಟಿ ರೂಪಾಯಿ ಕರವನ್ನು ಸಂಗ್ರಹಿಸಲಾಗಿದೆ. ಪ್ರತಿ ವರ್ಷ 100 ಕೋಟಿ ರೂ. ಇದರಿಂದ ಬಡ್ಡಿ ಸಂಗ್ರಹವಾಗುತ್ತಿದೆ. ಆದರೆ ಅಸಂಘಟಿತ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಕಾಲಕ್ಕೆ ಸಿಗುತ್ತಿಲ್ಲ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಜಂಟಿ ಆಯುಕ್ತ ವಸಂತ ಕುಮಾರ ಹಿಟ್ಟಣಗಿ, “ಭಾರತದಲ್ಲಿ 57 ಕಾರ್ಮಿಕ ಕಾಯಿದೆಗಳನ್ನು ರಚಿಸಲಾ ಗಿದೆ. ಅಸಂಘಟಿತ ಕಾರ್ಮಿಕರಿಗೆ ಹತ್ತು ಹಲವು ಲಾಭಗಳು ಈ ಕಾಯಿದೆಯಡಿ ನೀಡಲಾಗುತ್ತಿದೆ. ಈ ಕಾಯಿದೆಯಡಿ ಸಂಘಟಿತ ವರ್ಗದ ಶೇ. 4ರಷ್ಟು ಕಾರ್ಮಿಕರು ಮಾತ್ರ ಲಾಭ ಪಡೆಯು ತ್ತಿದ್ದಾರೆ. ಶೇ. 96ರಷ್ಟು ಇರುವ ಅಸಂಘಟಿತ ಕಾರ್ಮಿಕರು ಇದರಿಂದ ಸಿಗುವ ಸೌಲಭ್ಯದಿಂದ ವಂಚಿತರಾಗು ತ್ತಿದ್ದಾರೆ” ಎಂದು ವಿವರಿಸಿದರು.

“ಕರ್ನಾಟಕದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾಯಿದೆ 2006ರಲ್ಲಿ ಜಾರಿಯಾಗಿದೆ. 2007ರಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿ ಮಂಡಳಿ ರಚನೆ ಯಾಗಿದ್ದು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ 12 ರೀತಿಯ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ತಲಾ 2 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜೀವಗಾಂಧಿ ವಸತಿ ನಿಗಮದ ಸಹಯೋಗದೊಂದಿಗೆ ಮನೆ ನಿರ್ಮಿಸಿ ಕೊಡುವ ವ್ಯವಸ್ಥೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಕೋರಲಾಗಿದೆ” ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ, ಅಸಂಘಟಿತ ಕಾರ್ಮಿಕರ ಶ್ರಮದ ಫಲವಾಗಿ ಸುಸಜ್ಜಿತ ಕಟ್ಟಡಗಳು ನಿರ್ಮಾಣವಾಗು ತ್ತವೆ. ಆದರೆ ವಿವಿಧ ಸೌಲಭ್ಯಗಳ ಲಾಭದಿಂದ ವಂಚಿತರಾಗುತ್ತಿದ್ದಾರೆ. ಅಸಂಘಟಿತ ಕಾರ್ಮಿಕರು ಬಡ, ಆರ್ಥಿಕವಾಗಿ ಹಿಂದುಳಿದ ವರ್ಗದವರಾ ಗಿದ್ದರಿಂದ ಮತ್ತು ಅರಿವು ಇಲ್ಲದೇ ಇರುವುದರಿಂದ ಅವರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಅವರಿಗೆ ಸೌಲಭ್ಯಗಳ ಬಗ್ಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.


ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿಶ್ವನಾಥ ಅಂಗಡಿ, ವಕೀಲರ ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ, ಬೆಳಗಾವಿ ನಗರಾಭಿವದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎನ್. ರವೀಂದ್ರ, ಕಾರ್ಮಿಕ ಅಧಿಕಾರಿ ಸಂತೋಷ ಹಿಪ್ಪರಗಿ, ಹಿರಿಯ ವಕೀಲ ಬಿ.ಎಸ್. ಸಂಗತಿ ಹಾಜರಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಬಿ. ಬೂದಿಹಾಳ ಸ್ವಾಗತಿಸಿದರು. ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಆರ್.ಬಿ. ದೇಶಪಾಂಡೆ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.