ADVERTISEMENT

ಕೋಟೆ ಇನ್ನು ಉದ್ಯಾನ, ಫುಡ್ ಕೋರ್ಟ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 9:30 IST
Last Updated 19 ಜನವರಿ 2011, 9:30 IST

ಲದಲ್ಲಿ ಕಾಮಗಾರಿಗೆ ಚಾಲನೆ

ಬೆಳಗಾವಿ: ತಾಲ್ಲೂಕಿನ ರಾಜಹಂಸಗಡದ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು. ಇದರ ಅಭಿವೃದ್ಧಿಗಾಗಿ ಮೊದಲ ಹಂತದಲ್ಲಿ ರೂ. 4.07 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಶಾಸಕ ಸಂಜಯ ಪಾಟೀಲ ಹೇಳಿದರು.ತಾಲ್ಲೂಕಿನ ರಾಜಹಂಸಗಡ ಕೋಟೆಯಿಂದ ಮುಖ್ಯ ರಸ್ತೆಯ ವರೆಗಿನ ರೂ. 1.60 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋಟೆ ಹತ್ತಿರ ಫುಡ್ ಕೋರ್ಟ್, ಗ್ಯಾಲರಿ ನಿರ್ಮಾಣಕ್ಕಾಗಿ ರೂ. 40 ಲಕ್ಷ, ಕುಡಿಯುವ ನೀರು ಸರಬರಾಜಿಗಾಗಿ ರೂ.  24 ಲಕ್ಷ, ಕೋಟೆಯಲ್ಲಿ ಉದ್ಯಾನ ಅಭಿವೃದ್ಧಿಗಾಗಿ ರೂ. 10 ಲಕ್ಷ, ರಾಜಹಂಸಗಡ ಕೋಟೆ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ರೂ. 1.75 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.‘ಕಳೆದ 50 ವರ್ಷಗಳ ಕಾಲ ಜನಪ್ರತಿನಿಧಿಯಾಗಿದ್ದವರು ಕೋಟೆ ಅಭಿವೃದ್ಧಿಗಾಗಿ ಏನು ಮಾಡಿಲ್ಲ. ಈಗ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪ್ರವಾಸಿ ತಾಣವಾಗಲಿದೆ’ ಎಂದು ಹೇಳಿದರು.

‘ನಾಯಕರನ್ನು ಜಾತಿ, ಪ್ರದೇಶಕ್ಕೆ ಸೀಮಿತ ಮಾಡಬಾರದು. ಅವರು ಜಾತಿ ಹಾಗೂ ಪ್ರದೇಶ ಮೀರಿದವರಾಗಿದ್ದಾರೆ. ಎಲ್ಲರನ್ನೂ ಗೌರವಿಸಬೇಕು’ ಎಂದು ಅವರು ಕರೆ ನೀಡಿದರು.
ಜಿಲ್ಲಾಧಿಕಾರಿ ಏಕರೂಪ್ ಕೌರ್ ಮಾತನಾಡಿ, ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.ಕೂಡಲೇ ಎಲ್ಲ ಕಾಮಗಾರಿಗಳನ್ನು ಆರಂಭಿಸಲಾಗುವುದು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಸ್. ಬಳ್ಳಾರಿ, ಸಹಾಯಕ ಎಂಜಿನಿಯರ್ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.