ADVERTISEMENT

‘ಜಲಯೋಗ’ ಈ ಬಾರಿಯ ಆಕರ್ಷಣೆ

ಜಾಗೃತಿ ಜಾಥಾ 20ರಂದು, ಯೋಗ ದಿನಾಚರಣೆ 21ರಂದು

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 5:41 IST
Last Updated 9 ಜೂನ್ 2018, 5:41 IST

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್‌ 21ರಂದು ಗಾಂಧಿ ಭವನದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ  ತಿಳಿಸಿದರು.

ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೇಂದ್ರ ಸರ್ಕಾರದ ಸೂಚನೆಯಂತೆ ಬೆಳಿಗ್ಗೆ 7ರಿಂದ 8ರವರೆಗೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಾರ್ಥನೆ, 19 ಬಗೆಯ ಆಸನಗಳ ಪ್ರದರ್ಶನ, ಪ್ರಾಣಾಯಾಮ, ಧ್ಯಾನ ನಡೆಯಲಿದೆ. ಯೋಗ ಸಾಧಕರು ಹಾಗೂ ಅತ್ಯುತ್ತಮ ಯೋಗ ತರಬೇತುದಾರರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು’ ಎಂದರು.

‘ವಿಶೇಷವಾಗಿ ಆಚರಿಸುವುದಕ್ಕಾಗಿ, ಈ ಬಾರಿ ಜಿಲ್ಲಾಡಳಿತ ಹಾಗೂ ಈಜುಗಾರರ ಕ್ಲಬ್‌ನಿಂದ ಜಲ ಯೋಗ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳ ಲಾಗಿದೆ. ಅಂದು ಸಂಜೆ 5ರಿಂದ ಜಿಲ್ಲಾ ಕ್ರೀಡಾಂಗಣ ಸಮೀಪವಿರುವ ಕೆಎಲ್‌ಇ ಸಂಸ್ಥೆಯ ಈಜುಕೊಳದಲ್ಲಿ ನಡೆಯಲಿದೆ. ತರ ಬೇತುದಾರ ಉಮೇಶ್ ಕಲಘಟಗಿ ನೇತೃತ್ವದಲ್ಲಿ 40 ಜನರ ತಂಡವು ಪ್ರದರ್ಶನ ನೀಡಲಿದೆ. ವಿಶೇಷ ಮಕ್ಕಳು ಪ್ರದರ್ಶನ ನೀಡುತ್ತಿರುವುದು ವಿಶೇಷ’ ಎಂದು ಮಾಹಿತಿ ನೀಡಿದರು.

ADVERTISEMENT

‘ಜೂನ್‌ 20ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೋಗಾರವೇಸ್ ವೃತ್ತದವರೆಗೆ ಜಾಥಾ ಆಯೋಜಿಸಲಾಗಿದೆ. ಯೋಗ ಸಂಘ ಟನೆಗಳ ಸದಸ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ ಹೇಳಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಆರ್‌. ರಾಮಚಂದ್ರನ್, ಡಿಸಿಪಿ ಸೀಮಾ ಲಾಟ್ಕರ್, ಡಿಎಚ್‌ಒ ಡಾ.ಅಪ್ಪಾಸಾಹೇಬ ನರಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಸುರೇಶ ದೊಡ್ಡವಾಡ, ಯೋಗ ತರ ಬೇತುದಾರರಾದ ಇಂದಿರಾ ಜೋಶಿ, ಪಲ್ಲವಿ ನಾಡಕರ್ಣಿ, ಪ್ರಜಾಪಿತ ಬ್ರಹ್ಮಕುಮಾರಿ ಸೇವಾ ಕೇಂದ್ರದ ಪ್ರತಿನಿಧಿಗಳು, ಆಯುಷ್ ಒಕ್ಕೂಟ, ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಸದಸ್ಯರು ಪಾಲ್ಗೊಂಡಿದ್ದರು.

ಆರೋಗ್ಯದ ದೃಷ್ಟಿಯಿಂದ ಯೋಗವನ್ನು ಹೆಚ್ಚು ಪ್ರಸಿದ್ಧಿಗೊಳಿಸುವ ಅಗತ್ಯವಿದೆ. ನಿಯಮಿತವಾಗಿ ಯೋಗಾಭ್ಯಾಸ ಮಾಡಬೇಕು
ಎಸ್‌. ಜಿಯಾವುಲ್ಲಾ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.