ADVERTISEMENT

ಜಿಲ್ಲಾ ಸ್ಥಾನಮಾನಕ್ಕೆ ಒತ್ತಾಯ; ಬೈಲಹೊಂಗಲ ಸಂಪೂರ್ಣ ಬಂದ್‌

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2017, 9:16 IST
Last Updated 21 ಡಿಸೆಂಬರ್ 2017, 9:16 IST
ಬಂದ್ ವೇಳೆ ಪ್ರಯಾಣಿಕರಿಲ್ಲದೆ ಬೈಲಹೊಂಗಲ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು
ಬಂದ್ ವೇಳೆ ಪ್ರಯಾಣಿಕರಿಲ್ಲದೆ ಬೈಲಹೊಂಗಲ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು   

ಬೈಲಹೊಂಗಲ: ‘ಗಡಿ ಜಿಲ್ಲೆ ಬೆಳಗಾವಿಯನ್ನು ವಿಭಜನೆ ಮಾಡಬಾರದು. ಅನಿವಾರ್ಯವಾಗಿ ಮಾಡಲೇಬೇಕಾದರೆ ಬೈಲಹೊಂಗಲ ಕೇಂದ್ರವಾಗಿಟ್ಟುಕೊಂಡು ಜಿಲ್ಲಾ ರಚನೆ ಮಾಡಬೇಕು’ ಎಂದು ಒತ್ತಾಯಿಸಿ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಬುಧವಾರ ಕರೆ ನೀಡಿದ್ದ ತಾಲ್ಲೂಕು ಬಂದ್ ಸಂಪೂರ್ಣ ಬಂದ್‌ ಆಗಿತ್ತು.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್‌ ಮಾಡಿದ ವರ್ತಕರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಬಸ್, ಟ್ರಕ್, ಲಾರಿ, ಖಾಸಗಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಶಾಲೆ, ಕಾಲೇಜು , ಚಿತ್ರಮಂದಿರಗಳು, ಪೆಟ್ರೋಲ್ ಬಂಕ್‌ಗಳು, ಬ್ಯಾಂಕ್‌ಗಳು ಮುಚ್ಚಿದ್ದವು. ಬಸ್ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ರಸ್ತೆಗಳು ಖಾಲಿ ಖಾಲಿಯಾಗಿದ್ದವು. ಪರಸ್ಥಳಕ್ಕೆ ತೆರಳಬೇಕಾದ ಪ್ರಯಾಣಿಕರು ಪರದಾಡಿದರು.

ADVERTISEMENT

ಶಾಖಾ ಮೂರು ಸಾವಿರಮಠದಲ್ಲಿ ಸಭೆ ಸೇರಿದ ಮುಖಂಡರು, ಸಾರ್ವಜನಿಕರು, ‘ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬಾರದು. ವಿಭಜನೆ ಮಾಡುವುದು ಅನಿವಾರ್ಯವಾದರೆ ಉಪವಿಭಾಗ ಕೇಂದ್ರವಾಗಿರುವ ಬೈಲಹೊಂಗಲವನ್ನು ಪ್ರತ್ಯೇಕ ಜಿಲ್ಲಾ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.