ADVERTISEMENT

ಜಿಲ್ಲೆಯಾದ್ಯಂತ 4,353 ವ್ಯಾಜ್ಯಗಳು ಇತ್ಯರ್ಥ

ಮನಸ್ಸುಗಳನ್ನು ಬೆಸೆಯುವ ಲೋಕಅದಾಲತ್: ಬಿ.ಎಸ್‌. ಪಾಟೀಲ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 6:02 IST
Last Updated 23 ಏಪ್ರಿಲ್ 2018, 6:02 IST

ಬೆಳಗಾವಿ: ‘ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವಲ್ಲಿ ಸಹಕಾರಿಯಾಗಿರುವ ಲೋಕಅದಾಲತ್‌ಗಳು ಮನಸ್ಸುಗಳನ್ನು ಬೆಸೆಯುತ್ತವೆ’ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕಅದಾಲತ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಸಂಧಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಏಕೆಂದರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ತೀರ್ಪು ಬರಬೇಕಾದರೆ ತಡವಾಗುತ್ತದೆ. ಅಲ್ಲದೇ, ವ್ಯಾಜ್ಯಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ನ್ಯಾಯಾಲಯಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮನಸ್ಸು ಮುರಿಯದೇ, ಸಂಬಂಧ ಉಳಿಸಿಕೊಳ್ಳಲು ಲೋಕ ಅದಾಲತ್‌ಗಳ ಪ್ರಯೋಜನ ಪಡೆದುಕೊಳ್ಳಬೇಕು. ಇದರಿಂದ ಹೆಚ್ಚಿನ ಹಣ ಖರ್ಚಾಗುವ ಪ್ರಮೇಯವೂ ಇರುವುದಿಲ್ಲ’ ಎಂದು ಹೇಳಿದರು.

ADVERTISEMENT

‘ವಕೀಲರು ಹಾಗೂ ನ್ಯಾಯಾಧೀಶರ ಸಹಕಾರದಿಂದ ಲೋಕಅದಾಲತ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಸಾಧ್ಯವಾಗುತ್ತಿದೆ. ಸಮಾ
ರೋಪಾದಿಯಲ್ಲಿ ವ್ಯಾಜ್ಯಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದೇವೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಆರ್‌.ಜೆ. ಸತೀಶ ಸಿಂಗ್ ಮಾತನಾಡಿ, ‘480 ನ್ಯಾಯಾಧೀಶರು ಮಾಡುವಂತಹ ಕೆಲಸ
ವನ್ನು ಈ ಒಂದೇ ಲೋಕಅದಾಲತ್‌ನಲ್ಲಿ ನಿರ್ವಹಿಸಲಾಗುತ್ತಿದೆ. ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಲಯಕ್ಕೆ ಬರುತ್ತಾರೆ ಎಂದರೆ, ಅವರಿಗೆ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ಇದೆ ಎನ್ನುವುದು ಮೇಲ್ನೋಟಕ್ಕೆ ಅರ್ಥವಾಗುತ್ತದೆ. ಅದನ್ನು ಉಳಿಸಿಕೊಳ್ಳಬೇಕು. ಇಲ್ಲಿಯವರೆಗೆ 28ಸಾವಿರ ವ್ಯಾಜ್ಯಗಳನ್ನು ಅದಾಲತ್‌ನಲ್ಲಿ ಬಗೆಹರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.