ADVERTISEMENT

ಡೆಂಗೆ ಪ್ರಕರಣ: ಗ್ರಾ.ಪಂ.ಗೆ ಔದ್ರಾಮ್ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2012, 6:25 IST
Last Updated 20 ಜೂನ್ 2012, 6:25 IST

ಘಟಪ್ರಭಾ (ಗೋಕಾಕ): ಇಲ್ಲಿಗೆ ಸಮೀಪದ ದುರದುಂಡಿ ಗ್ರಾಮದಲ್ಲಿ ಡೆಂಗೆ ಜ್ವರ ಪ್ರಕರಣಗಳು ಮತ್ತೆ- ಮತ್ತೆ ವರದಿಯಾಗುತ್ತಿರುವ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತಿ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ವೀಕ್ಷಿಸಲು  ತಹಶೀಲ್ದಾರ ಔದ್ರಾಮ  ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಪಾಟೀಲ ನೇತೃತ್ವದ ಅಧಿಕಾರಿ ಗಳ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಗ್ರಾ.ಪಂ ಅಧ್ಯಕ್ಷ ಅಶೋಕ ಖಂಡ್ರಟ್ಟಿ ಅವರು ಗ್ರಾಮ ಪಂಚಾಯಿತಿ ವತಿಯಿಂದ ನೈರ್ಮಲ್ಯೀಕರಣಕ್ಕಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕಳೆದೆರಡು ವಾರಗಳಿಂದ ಗ್ರಾ.ಪಂ. ಕೈಗೊಂಡ ಸುರಕ್ಷತಾ ಕ್ರಮಗಳ ಮೇಲೆ ನಿಗಾ ವಹಿಸಿದೆ ಎಂದು ತಿಳಿಸಿದರು.

ಗ್ರಾಮದಾದ್ಯಂತ ವಾರದಲ್ಲಿ ಮೂರು ಬಾರಿ ಫಾಗಿಂಗ್ ಮಾಡಿ ಎಲ್ಲ ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಲಾಗುತ್ತಿದೆ.

 ಡಿ.ಡಿ.ಟಿ. ಪೌಡರ್ ಸಿಂಪಡಿಸಿ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಚ್ಛತಾ ಕಾರ್ಯವನ್ನು ನಿರಂತರ ವಾಗಿ ಮುಂದುವರಿಸಿಕೊಂಡು ಹೊಗಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಕಟ್ಟು-ನಿಟ್ಟಿನ ಸೂಚನೆ ಗಳನ್ನು ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಂ.ಗೂಳಪ್ಪನವರ. ಸಹಾಯಕ ಎಂಜಿನಿಯರ್ ರಾಜಕುಮಾರ. ಗ್ರಾಮ ಪಂಚಾಯಿತಿ  ಅಧ್ಯಕ್ಷ ಅಶೋಕ ಖಂಡ್ರಟ್ಟಿ. ಕಾರ್ಯದರ್ಶಿ ವಿ.ಡಿ.ಮಾಳಿ, ಆರೋಗ್ಯ ಸಹಾಯಕಿ ಚಂದ್ರವ್ವ ಪೂಜೇರಿ  ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.