ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಮತಕ್ಷೇತ್ರದಿಂದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವು (ಎನ್‌ಸಿಪಿ) ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ ಎಂದು ಎನ್‌ಸಿಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ. ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ಕ್ಷೇತ್ರದಿಂದ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ರಾಮಚಂದ್ರ ಸಿ. ಮೋದಗೆಕರ ಅವರು ಹಾಗೂ ಚಿಕ್ಕೋಡಿ ಕ್ಷೇತ್ರದಿಂದ ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷರಾದ ಸುರೇಂದ್ರ ಪ್ರಧಾನ ತಲವಳಕರ, ಪ್ರತಾಪ ವಸಂತರಾವ್ ಪಾಟೀಲ, ಮಹಾವೀರ ಮಹಾಜನ ಅವರ ಹೆಸರನ್ನು ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರಕುಮಾರ ಗೌಡ ಅವರಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜ್ಯದ ನಿರೀಕ್ಷಕರಾದ ಗೋವಿಂದರಾವ್ ಆಧಿಕ್ ಅಧ್ಯಕ್ಷತೆಯಲ್ಲಿ ಈಚೆಗೆ ಸಭೆ ನಡೆದಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮುಂಬೈನಲ್ಲಿ ಸೋಮವಾರ (ಮಾ. 17) ಸಭೆ ಕರೆದಿದ್ದಾರೆ’ ಎಂದು ಕೆ.ಜಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.