ADVERTISEMENT

ಬೇಸಿಗೆಯಲ್ಲಿ ಕುಡಿವ ನೀರು ಪೂರೈಕೆಗೆ ಆದ್ಯತೆ: ಭಾಸ್ಕರ್

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 9:21 IST
Last Updated 6 ಮಾರ್ಚ್ 2014, 9:21 IST
ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಓಬಳಾಪುರ ರಸ್ತೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ. ಎಂ. ಭಾಸ್ಕರ್‌ ವೀಕ್ಷಿಸಿದರು.
ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಓಬಳಾಪುರ ರಸ್ತೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ. ಎಂ. ಭಾಸ್ಕರ್‌ ವೀಕ್ಷಿಸಿದರು.   

ರಾಮದುರ್ಗ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮ ಗಾರಿ ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಂಚಾ ಯತ್‌ ರಾಜ್ ಮತ್ತು ಗ್ರಾಮೀಣಾಭಿ ವೃದ್ಧಿ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಟಿ.ಎಂ.ಭಾಸ್ಕರ್ ಸೂಚಿಸಿದರು.

ಬುಧವಾರ ತಾಲ್ಲೂಕಿನ ಬಟಕುರ್ಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮ ಕುಡಿಯುವ ನೀರಿನ ಯೋಜ ನೆಯ ಕಾಮಗಾರಿಯನ್ನು ಓಬಳಾಪುರ ಗ್ರಾಮದ ಹತ್ತಿರ ವೀಕ್ಷಿಸಿದ ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಸೂಚಿಸಿದರು.

ಕುಡಿಯುವ ನೀರನ್ನು ಖಾಸಗಿ ವ್ಯಕ್ತಿಗಳಿಂದ ಪಡೆದುಕೊಂಡು ಪೂರೈಕೆ ಮಾಡಬೇಕು. ಯಾವುದೇ ಕಾರಣಕ್ಕೂ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ತೊಂದರೆ ಉದ್ಘವಿಸ ದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.

ಸಾಲಹಳ್ಳಿ (ಬೂದನೂರ) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನ ಕಾರ್ಯದರ್ಶಿಗಳು ಆಸ್ಪತ್ರೆಯ ವ್ಯವಸ್ಥೆ ಪರಿಶೀಲನೆ ನಡೆಸಿ ದರು. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಾಧಿ ಕಾರಿಗಳ ಕೊರತೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.

ತಾಲೂಕಿನಲ್ಲಿ ಕೆ.ಜುನಿಪೇಠ, ಸುನ್ನಾಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಪಡೆದರು. ಕಟಕೋಳ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಈ ಸಂದಭರ್ದಲ್ಲಿ ಜಿಲ್ಲಾ ಪಂಚಾ ಯಿತಿ ಸಿಇಒ ದೀಪಾ ಚೋಳನ್, ಜಿಪಂ ಕಾರ್ಯನಿರ್ವಾಹಕ ಅಭಿಯಂತ ದ್ಯಾಮನ್ನವರ, ಉಪವಿಭಾಗಾಧಿಕಾರಿ ವಿಜಯಕುಮಾರ ಹೊನಕೇರಿ, ತಹ ಶೀಲ್ದಾರ್‌ ಎನ್.ಬಿ.ಪಾಟೀಲ, ತಾಲ್ಲೂಕು ಪಂಚಾಯ್ತಿ ಅಧಿಕಾರಿ ಕೆ. ಎಸ್.ಪಾಟೀಲ ಮತ್ತು ವಿವಿಧ ಇಲಾ ಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.