ADVERTISEMENT

ಬೋಧಕೇತರ ಹುದ್ದೆಗಳಿಗೆ ಲಿಖಿತ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 6:16 IST
Last Updated 21 ಡಿಸೆಂಬರ್ 2012, 6:16 IST
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಾದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಹಾಗೂ ಡಾಟಾ ಎಂಟ್ರಿ ಆಪರೇಟರ್ಸ್‌ ಸ್ಥಾನಗಳಿಳಿಗೆ ಈಗಾಗಲೇ ಸಲ್ಲಿಸಿರುವ ಅಭ್ಯರ್ಥಿಗಳಿಗೆ   ಜನೆವರಿ 20 ರಂದು ಲಿಖಿತ ಪರೀಕ್ಷೆಯನ್ನು (ಬಹು ಆಯ್ಕೆ ಪ್ರಶ್ನೆ ಮಾದರಿಯ) ಬೆಳಗಾವಿ, ವಿಜಾಪುರ ಹಾಗೂ ಬಾಗಲಕೋಟೆ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.  
 
ಜ. 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ದ್ವಿತೀಯ ದರ್ಜೆ ಸಹಾಯಕ ಹಾಗೂ ಡಾಟಾ ಎಂಟ್ರಿ ಆಪರೇಟರ್ಸ್‌ ಹಾಗೂ ಮಧ್ಯಾಹ್ನ 2 ರಿಂದ 4ರ ವರೆಗೆ ಪ್ರಥಮ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆ ನಡೆಯಲಿದೆ. 
 
ಬಾಗಲಕೋಟೆ ಜಿಲ್ಲೆಯ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ಕೇಂದ್ರಗಳಲ್ಲಿ, ವಿಜಾಪುರ ಜಿಲ್ಲೆಯವರು ವಿಜಾಪುರ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳು ಮತ್ತು ಇತರೆ ಜಿಲ್ಲೆಯ ಅಭ್ಯರ್ಥಿಗಳು ಪರೀಕ್ಷೆಯನ್ನು ಬೆಳಗಾವಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕು. 
 
ಬಹು ಆಯ್ಕೆ (ಇಕಿ) ಪರೀಕ್ಷೆಯು ಸಾಮಾನ್ಯ ಜ್ಞಾನ, ಇಂಗ್ಲಿಷ್ ಭಾಷಾ ಜ್ಞಾನ, ಸಾಮಾನ್ಯ ಗಣಿತ, ತಾರ್ಕಿಕ ತಿಳುವಳಿಕೆ (್ಝಟಜಜ್ಚಿಚ್ಝ ್ಟಛಿಟ್ಞಜ್ಞಿಜ) ಮತ್ತು ಪ್ರಚಲಿತ ವಿದ್ಯಮಾನಗಳ ವಿಷಯಗಳನ್ನು ಹೊಂದಿರುತ್ತದೆ. ಪ್ರತಿ ವಿಷಯಕ್ಕೆ 20 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೆ 1 ಗುಣದಂತೆ ಒಟ್ಟು 100 ಅಂಕಗಳನ್ನು ಹೊಂದಿರುತ್ತದೆ. 
 
ಈ ಪ್ರಶ್ನೆಗಳನ್ನು ಓಎಂಆರ್‌ದಲ್ಲಿ ಉತ್ತರಿಸಲು 90 ನಿಮಿಷಗಳ ಅವಧಿ ಇರುತ್ತದೆ. ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯಥಿಗಳು ಜ. 10ರ ನಂತರ ಪ್ರವೇಶ ಪತ್ರವನ್ನು ಡಿಡಿಡಿ.್ಟ್ಚ್ಠಚಿ.ಚ್ಚ.ಜ್ಞಿ ವೆಬ್‌ಸೈಟ್‌ದಿಂದ ಡೌನಲೋಡ್ ಮಾಡಿಕೊಳ್ಳಬಹುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.