ಗೋಕಾಕ: 2008- 09ನೇ ಸಾಲಿನ ಭಾಗ್ಯಲಕ್ಷ್ಮಿ ಯೋಜನೆ ಬಾಂಡ್‌ಗಳನ್ನು ಫಲಾನುಭವಿಗಳಿಗೆ ಶೀಘ್ರವೇ ನೀಡುವಂತೆ ಆಗ್ರಹಿಸಿ ಕನ್ನಡ ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ಈಚೆಗೆ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಾಂಡ್‌ಗಳನ್ನು ನೀಡಲು ವಿಳಂಬ ನೀತಿ ಅನುಸರಿಸಬಾರದು. ಅರ್ಹ ಫಲಾನುಭವಿಗಳಿಗೆ ಶೀಘ್ರವೇ ತಲುಪಿಸುವಂತೆ ಆಗ್ರಹಿಸಿ ತಹಶೀಲ್ದಾರ ಉದಯ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಕುಮಾರ ಶಿಡ್ಲಪ್ಪಗೋಳ, ತಾಲ್ಲೂಕು ಘಟಕದ ಅಧ್ಯಕ್ಷ ಯುನೂಸ್ ನದಾಫ್, ಲಕ್ಷ್ಮಣ ವ್ಯಾಪಾರಿ, ನಿಂಗರಾಜ ಗೌಡರ, ಫಯಾಜ್ ಫೀರಜಾದೆ, ಮಲ್ಲಪ್ಪ ಮಡಿವಾಳರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.