ADVERTISEMENT

‘ಮುಂದಿನ ಪೀಳಿಗೆಗೆ ಪರಿಸರ ಕಾಪಾಡಿ’

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 5:56 IST
Last Updated 7 ಜೂನ್ 2018, 5:56 IST

ಪರಮಾನಂದವಾಡಿ: ‘ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿದ್ದಾನೆ. ಇದು ಹೀಗೆಯೇ ಮುಂದುವರಿದಲ್ಲಿ ಕೆಲವೇ ವರ್ಷಗಳಲ್ಲಿ ಎಲ್ಲ ಜೀವ
ಸಂಕುಲವೂ ಭೀಕರ ಪರಿಸ್ಥಿತಿ ಎದುರಿಸಬೇಕಾಗುತ್ತದೆ’ ಎಂದು ಪ್ರಾಚಾರ್ಯ ಎನ್‌.ಬಿ. ಕುಸನಾಳೆ ಹೇಳಿದರು.

ಗ್ರಾಮದ ಎಸ್.ಆರ್. ದಳವಾಯಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿ ಅವರು ಮಾತನಾಡಿದರು.

‘ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸಿ, ಪರಿಸರ ಸಂರಕ್ಷಿಸಬೇಕು. ಇದರಿಂದ ಮುಂದಿನ ಪೀಳಿಗೆಯವರು ನೆಮ್ಮದಿ, ಆರೋಗ್ಯದಿಂದ ಬದುಕಲು ಸಾಧ್ಯವಾಗುತ್ತದೆ. ಇಲ್ಲವಾದರೆ ನಮ್ಮ ಮಕ್ಕಳು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎನ್ನುವುದನ್ನು ಮರೆಯಬಾರದು’ ಎಂದು ತಿಳಿಸಿದರು.

ADVERTISEMENT

‘ಪರಿಸರ ನಾಶದಿಂದಾಗಿ ತಾಪಮಾನ ಏರಿಕೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಬೇಕು’ ಎಂದರು.

ಉಪನ್ಯಾಸಕರಾದ ವಿ.ವಿ. ದಳವಾಯಿ, ಜಿ.ಎಂ. ಬಸ್ತವಾಡೆ, ಬಿ.ಕೆ. ದಳವಾಯಿ, ಎಸ್.ಎಸ್. ಹಸರೆ, ವಿ.ಪಿ. ಮುರಾರಿ, ವೈ.ಎ. ಮೀರಾಬಾಯಿ, ಎನ್.ಎಸ್. ಬಂಡಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.