ನಿಪ್ಪಾಣಿ: ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಮಾಹಿತಿ ನೀಡದೇ ಟ್ರಸ್ಟ್‌ವೊಂದರ ಗಜರಾಜ (ಆನೆ) ಬಳಸಿದ್ದಕ್ಕೆ ಅರಣ್ಯ ಇಲಾಖೆ ಕಾರಣ ಕೇಳಿ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.
ಚಿಕ್ಕೋಡಿ ತಾಲ್ಲೂಕಿನ ಕೋಥಳಿ ಗ್ರಾಮದ ಆಚಾರ್ಯ ದೇಶಭೂಷಣ ಜೈನದಿಗಂಬರ ಶಾಂತಿಗಿರಿ ಟ್ರಸ್ಟ್‌ನ ಆನೆಯನ್ನು ಮೆರವಣಿಗೆಗೆ ಬಳಸಲಾಗಿತ್ತು. ಆದರೆ, ಆನೆ ಬಳಸುವ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ.
`ಟ್ರಸ್ಟ್ ಆನೆ ಬಳಸಲು ತೊಂದರೆಯಿಲ್ಲ. ಆದರೆ, ಇದರ ಬಗ್ಗೆ ಮೊದಲು ನಮಗೆ ಮಾಹಿತಿ ನೀಡಬೇಕು. ಸಾಹಿತ್ಯ ಸಮ್ಮೇಳನದಂಥ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಯಾವುದೇ ಅನಾಹುತ ಸಂಭವಿಸಬಾರದು ಎಂಬ ಉದ್ದೇಶದಿಂದ ನಾವು ಭದ್ರತೆ ಒದಗಿಸುತ್ತೇವೆ. ಆದರೆ, ಟ್ರಸ್ಟ್‌ನವರು ಯಾವುದೇ ಮಾಹಿತಿ ನೀಡಿಲ್ಲ. ಆದ್ದರಿಂದ ಕಾರಣ ಕೇಳಿ ನೋಟೀಸು ನೀಡಲಾಗಿದೆ' ಎಂದು ಅರಣ್ಯ ಇಲಾಖೆಯ ಗೋಕಾಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ `ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.