ADVERTISEMENT

ರಾಯಬಾಗ: ತಾಲ್ಲೂಕು ಮಟ್ಟದ ಮಕ್ಕಳ ಸ್ಪರ್ಧೆ 9ರಂದು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 9:10 IST
Last Updated 5 ಅಕ್ಟೋಬರ್ 2012, 9:10 IST

ರಾಯಬಾಗ: ಬೆಂಗಳೂರಿನ ಜವಾಹರ ಬಾಲಭವನದಲ್ಲಿ 2012-13ನೇ ಸಾಲಿನ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರವನ್ನು ವಿವಿಧ ಪ್ರಕಾರಗಳಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ತಾಲ್ಲೂಕು ಮಟ್ಟದ ಸ್ಪರ್ಧೆಯನ್ನು ಇದೇ 9ರಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ  ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ ಮೂರರಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಕಥೆ, ಕವನ, ಪ್ರಬಂಧ ಬರೆಯುವುದು. ಕಲೆ ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ, ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕ ಪಾತ್ರಾಭಿನಯ, ಯೋಗ ನೃತ್ಯ, ಸಂಗೀತ ಇತ್ಯಾದಿ ಯಾವುದಾದರೂ ಒಂದು ಕಲೆ ಪ್ರದರ್ಶಿಸಲು ಅವಕಾಶ ಇದೆ. ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟ ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ, ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ ನೀಡಬೇಕು.

ಕಲಾ ಸ್ಪರ್ಧೆಗಳಲ್ಲಿ ಪ್ರತಿ ಕಲಾ ಸ್ಪರ್ಧೆಯಲ್ಲಿ ಆಯ್ಕೆಯಾದ ಮೊದಲ ಹಾಗೂ ಎರಡನೇ ಸ್ಥಾನ ಪಡೆದ ಮಕ್ಕಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು. ಆಯ್ಕೆಯಾದ 9ರಿಂದ 16 ವರ್ಷದೊಳಗಿನ ಮಕ್ಕಳನ್ನು ಪ್ರತಿ ಕಲಾ ಪ್ರಕಾರಗಳಿಂದ ಎರಡು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಇದೇ 9ರಂದು ಆಯ್ಕೆ ಮಾಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ನಿಗದಿತ ಅರ್ಜಿಯಲ್ಲಿ ಶಿಶು ಅಭಿವೃದ್ದಿ ಅಧಿಕಾರಿಗಳ ಕಚೇರಿಯಿಂದ ಪಡೆದು ಪಾಲಕರ ಹಾಗೂ ಶಾಲಾ ಮುಖ್ಯಸ್ಥರ ಶಿಫಾರಸಿನೊಂದಿಗೆ ಪಾಸ್‌ಪೋರ್ಟ್ ಸೈಜಿನ ನಾಲ್ಕು ಭಾವ ಚಿತ್ರದೊಂದಿಗೆ ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಲು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 08331-225292 ಸಂಪರ್ಕಿಸಲು ಕೋರಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.