ಬೆಳಗಾವಿ: `ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗಬಾರದು. ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಅಡವಿ ಸಿದ್ದೇಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಸಲಹೆ ನೀಡಿದರು.
ಹುಕ್ಕೇರಿ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಾಡೇಶ ಹಟ್ಟಿ ಮಾತನಾಡಿ, ಈಗಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಉತ್ತಮ ಪ್ರಯತ್ನ ಹಾಗೂ ಪರಿಶ್ರಮದಿಂದ ಮಾತ್ರ ಮುಂದಿನ ಭವಿಷ್ಯ ರೂಪುಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಂ.ಬಿ.ಜಕ್ಕಣ್ಣವರ ಮಾತನಾಡಿ, `ವಿದ್ಯಾರ್ಥಿಗಳು ಟಿವಿ ಹಾಗೂ ಮೊಬೈಲ್ ಮೇಲಿನ ವ್ಯಾಮೋಹ ಬಿಟ್ಟು ಓದಿನ ಕಡೆಗೆ ಗಮನ ನೀಡಬೇಕು~ ಎಂದು ಸಲಹೆ ಮಾಡಿದರು.
ಭರಮಗೌಡ ಪಾಟೀಲ, ಜಯಶ್ರೀ ಪಂಗನ್ನವರ, ಟಿ.ಬಿ.ಪಟೇಕರ ಮತ್ತಿತರರು ಉಪಸ್ಥಿತರಿದ್ದರು. ಎ.ಎಸ್.ಖೋತ್ ನಿರೂಪಿಸಿದರು. ಅನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಕೆ.ಕಣಬರಗಿ ಸ್ವಾಗತಿಸಿದರು. ಪಿ.ಎಸ್.ಪಟ್ನಾಳ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.