ADVERTISEMENT

ವಿಶ್ವ ಕನ್ನಡ ಸಮ್ಮೇಳನ ಜಾಗೃತಿ ಜಾಥಾಕ್ಕೆ ಚಾಲನೆ.

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2011, 10:45 IST
Last Updated 23 ಫೆಬ್ರುವರಿ 2011, 10:45 IST

ಗೋಕಾಕ: ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದಲ್ಲಿ ಸೋಮವಾರ ಜಾಗೃತಿ ಜಾಥಾ ಜರುಗಿತು.ವಾಲ್ಮೀಕಿ ಕ್ರೀಡಾಂಗಣದಲ್ಲಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಜಾಥಾಕ್ಕೆ ಚಾಲನೆ ನೀಡಿ, ಸಮ್ಮೇಳನ ಯಶಸ್ವಿಗೊಳಿಸಲು ಶ್ರಮಿಸುವಂತೆ ಕರೆ ನೀಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು. ಬಸವೇಶ್ವರ ವೃತ್ತದಲ್ಲಿ ಸಮಾರೋಪಗೊಂಡ ಜಾಥಾ ಉದ್ದೇಶಿಸಿ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಸಮ್ಮೇಳನ ಸ್ಮರಣೀಯವನ್ನಾಗಿಸುವಂತಹ ಕಾರ್ಯವನ್ನು ಪ್ರತಿಯೊಬ್ಬ ಕನ್ನಡಿಗರು ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.ಜಾಥಾದಲ್ಲಿ ನಗರಸಭೆ ಅಧ್ಯಕ್ಷೆ ಸಾವಿತ್ರಿ ಕಂಬಳಿ, ನಿವೃತ್ತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ, ಸಾಹಿತಿ ಮಹಾಲಿಂಗ ಮಂಗಿ, ಪ್ರಾಧ್ಯಾಪಕ ಡಾ. ಸಿ.ಕೆ.ನಾವಲಗಿ, ಪ್ರೊ. ಜಿ.ವಿ.ಮಳಗಿ, ಗೋಕಾಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಗಜಾನನ ಮನ್ನಿಕೇರಿ, ದೈಹಿಕ ಶಿಕ್ಷಣಾಧಿಕಾರಿ ಸುಳೇಗಾಂವಿ, ಕರವೇ ಕಾರ್ಯಕರ್ತರು ಹಾಗೂ ನಗರದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.