ADVERTISEMENT

ಶಾಸಕರ ವಿರುದ್ಧದ ಆರೋಪ ನಿರಾಧಾರ: ಸಣ್ಣಕ್ಕಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 7:03 IST
Last Updated 5 ಸೆಪ್ಟೆಂಬರ್ 2013, 7:03 IST

ಗೋಕಾಕ: ವಿಧಾನಸಭಾ ಚುನಾವಣೆ ವೇಳೆಗೆ ಅಕ್ರಮ ಮದ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ರೇಣುಕಾ ಬಾಳಪ್ಪ ನಾಯಕ ಅವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಜಿ.ಪಂ. ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಮತ್ತು ಟಿಎಪಿಸಿಎಂಎಸ್ ನಿರ್ದೇಶಕ ಅಶೋಕ ನಾಯಕ ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲಿ ತಪಸಿ ಗ್ರಾಮದ ರೇಣುಕಾ ಬಾಳಪ್ಪ ನಾಯಕ ಅವರು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ವಿರುದ್ಧ ವಿಧಾನಸಭಾ ಚುನಾವಣೆ ಕಾಲಕ್ಕೆ ಅಕ್ರಮ ಮದ್ಯ ಸಾಗಣೆ ಮಾಡಿರುವ ಕುರಿತಂತೆ ದೂರು ಸಲ್ಲಿಸಿದ್ದು ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣಕ್ಕೂ ಮತ್ತು ಶಾಸಕರಿಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ಕೆಲವು ಕಾಣದ ಕೈಗಳ ಕೈವಾಡವಿದೆ ಎಂಬ ಶಂಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮದ್ಯ ಸಾಗಾಟ ತಡೆಗಟ್ಟುವಂತೆ ಕೋರಿ ಬಾಳಪ್ಪ ನಾಯಿಕ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಚುನಾವಣಾಧಿಕಾರಿಗಳು ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾಗ ಆರೋಪ ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ. ಕೆಲವರ ಷಡ್ಯಂತ್ರದಿಂದ ಮುಖ್ಯಮಂತ್ರಿಗಳ ಬಳಿ ತೆರಳಿ ದೂರು ಸಲ್ಲಿಸಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಶಿಕ್ಷಕರ ದಿನಾಚರಣೆ ಇಂದು
ಮುನವಳ್ಳಿ:
ಜೆ.ಎಸ್.ಪಿ. ಸಂಘದ ಬಿ.ಎಫ್. ಯಲಿಗಾರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇದೇ 5 ರಂದು ಶಿಕ್ಷಕರ ದಿನಾಚರಣೆ ಜರುಗಲಿದೆ. ಪ್ರಾಚಾರ್ಯ ಎ.ಎಸ್.ಅಮೋಘಿಮಠ ಅಧ್ಯಕ್ಷತೆ ವಹಿಸಲಿದ್ದು,  ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹ.ಬ. ಅಸೂಟಿ, ಕಾರ್ಯದರ್ಶಿ ವಿ.ಎಸ್. ಯಕ್ಕುಂಡಿ ಆಗಮಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.