ADVERTISEMENT

ಶ್ರೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಕೆ: ನರೇಂದ್ರಸ್ವಾಮಿ

ಅನುಸೂಚಿತ ಜಾತಿ: ಪಂಗಡಗಳ ಕಲ್ಯಾಣ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 8:02 IST
Last Updated 7 ಜನವರಿ 2014, 8:02 IST

ಬೆಳಗಾವಿ: ‘ವಿಧಾನ ಮಂಡಲದ ಅನು ಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಮುಂಬರುವ ಅಧಿವೇಶನಕ್ಕೆ ಮೊದಲು ತನ್ನ ಮಧ್ಯಂತರ ವರದಿಯನ್ನು ವಿಧಾನ ಸಭೆ ಅಧ್ಯಕ್ಷರಿಗೆ ಸಲ್ಲಿಸಲಿದೆ’ ಎಂದು ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.


ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜನರಿಗಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಬಗ್ಗೆ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಸಮಿತಿಯು ಈಗಾಗಲೇ ಈ ಪಂಗಡ ಗಳ ಜನರ ಕಲ್ಯಾಣಕ್ಕಾಗಿ ಇರುವ ವಿವಿಧ ಇಲಾಖೆಗಳಿಂದ ಜಾರಿಗೊಳಿಸಿ ರುವ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದೆ. ಇದರ ಆಧಾರದ ಮೇಲೆ ಮಧ್ಯಂತರ ವರದಿಯನ್ನು ಶೀಘ್ರವೇ ಸಲ್ಲಿಸಲಿದೆ ಎಂದು ತಿಳಿಸಿದರು.

ಅನುಸೂಚಿತ ಜಾತಿ ಮತ್ತು ಅನು ಸೂಚಿತ ಪಂಗಡಗಳ ಜನರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾವುದೇ ನಿರ್ದಿಷ್ಟವಾದ ಕಾರ್ಯಕ್ರಮ ಅನುಷ್ಠಾನಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೂ ಸಹ ಕ್ರಮ ಕೈಗೊಂಡಿಲ್ಲ ಎಂದರು.

ಈ ಇಲಾಖೆಯು ಎಸ್ಸಿಪಿ ಮತ್ತು ಪಿಎಸ್ಪಿ ಅನುದಾನದ ಬಳಕೆ, ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಮೀಸಲಾತಿ, ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ ಸೇರಿ ದಂತೆ ವಿವಿಧ ವಿಷಯಗಳ ಕುರಿತು ಸಮಾಜ ಕಲ್ಯಾಣ ಇಲಾಖೆ ಹಾಗೂ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳ ಸಮ್ಮುಖದಲ್ಲಿ ಬೆಂಗಳೂರಿ ನಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆಯ ಕೊರತೆ ಎದ್ದು ಕಾಣುತ್ತದೆ. ವೈದ್ಯರ ವೇತನ ಪರಿಷ್ಕರಣೆ, ಗ್ರಾಮೀಣ ಭಾಘದ ವೈದ್ಯರಿಗೆ ವಿಶೇಷ ಸವಲತ್ತುಗಳನ್ನು ಕೊಡುವ ಅಗತ್ಯವಿದೆ. ಎಸ್‌ಸಿ, ಎಸ್‌ಟಿ ಸಮುದಾಯದ ಆರೋಗ್ಯ ಸುಧಾರಣೆಗೆ ಆರೋಗ್ಯ ಇಲಾಖೆ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಆರೋಗ್ಯ ಇಲಾಖೆ ಸಂ ಪೂರ್ಣ ವಿಫಲವಾಗಿದ್ದು, ಈ ಕುರಿತು ವರದಿಯಲ್ಲಿ ತಿಳಿಸಲಾಗುವುದು ಎಂದರು.

‘ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಬಹುತೇಕ ಇಲಾಖೆಗಳು ನಿರಾಸಕ್ತಿ ತೊರಿವೆ. ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಜಾರಿಗೆ ತಂದಿರುವ 1978ರ ಕಾಯ್ದೆಯನ್ನು ಉಲ್ಲಂಘಿಸ ಲಾಗಿದೆ. ನಾವೇ ರೂಪಿಸಿದ ಕಾನೂನು ಅನ್ನು ನಾವೇ ಪಾಲಿಸುತ್ತಿಲ್ಲ. ರಾಜ ಕೀಯ ನೀತಿ ಹಾಗೂ ಅಧಿಕಾರಿಗಳ ವೈಫಲ್ಯವೇ ಇದಕ್ಕೆ ಕಾರಣ’ ಎಂದು ಹೇಳಿದರು.

ಸಮಿತಿ ಸದಸ್ಯರು ಹಾಗೂ ಶಾಸಕ ರಾದ ಗೋವಿಂದ ಕಾರಜೋಳ, ಬಿ.ಬಿ. ನಿಂಗಯ್ಯ, ಎಚ್.ಆರ್.ಅಲಗೂರು, ಡಾ. ಉಮೇಶ ಜಾಧವ, ಗುರು ಪಾಟೀಲ ಶಿರವಾಳ, ವಿಧಾನ ಪರಿಷತ್ ಸದಸ್ಯರಾದ ಪ್ರೊ. ಪಿ.ವಿ.ಕೃಷ್ಣಭಟ್, ಮೃತ್ಯುಂಜಯ ಜಿನಗಾ ಹಾಗೂ ಆರ್.ಧರ್ಮಸೇನ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ವಿಧಾನಸಭೆಯ ಜಂಟಿ ಕಾರ್ಯದರ್ಶಿ ಎಂ.ಗುರುರಾಜ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ. ವೆಂಕ ಟಯ್ಯ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತ ರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT