ADVERTISEMENT

`ಸಾಂಪ್ರದಾಯಿಕ ಕಲಾ ಮಾಧ್ಯಮ ಉಳಿಸಿ'

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 8:24 IST
Last Updated 20 ಡಿಸೆಂಬರ್ 2012, 8:24 IST

ಬೆಳಗಾವಿ: `ಗ್ರಾಮೀಣ ಪ್ರದೇಶದಲ್ಲಿರುವ ಸಾಂಪ್ರದಾಯಿಕ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ' ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಇಲ್ಲಿನ ಕುಮಾರಗಂಧರ್ವ ರಂಗಮಂದಿರದಲ್ಲಿ ನಡೆದಿರುವ ಬೆಳಗಾವಿ ವಿಭಾಗ ಮಟ್ಟದ ಯುವಜನ ಮೇಳವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಇಂದಿನ ಸಾಂಪ್ರದಾಯಿಕ ಕಲೆಗಳು ಇಂದು ನಶಿಸಿ ಹೋಗುತ್ತಿವೆ. ಅವುಗಳ ರಕ್ಷಣೆ ಮಾಡುವುದರ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಬೇಕಾದ ಮಹತ್ತರ ಜವಾಬ್ದಾರಿಯು ಇಂದಿನ ಯುವಜನರ ಮೇಲಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಲು ಇಂಥ ವೇದಿಕೆಗಳು ಸಹಾಯವಾಗುತ್ತದೆ. ಬೆಳಕಿಗೆ ಬಾರದ ಅನೇಕ ಕಲಾವಿದರು ಇಂಥ ಯುವಜನ ಮೇಳದಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುವುದರ ಮೂಲಕ ಮುಖ್ಯವಾಹಿನಿಗೆ ಬರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಸಹ ಹಮ್ಮಿಕೊಂಡಿವೆ. ಈ ಯೋಜನೆಗಳ ಲಾಭವನ್ನು ಯುವಜನರು ಪಡೆಯಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.