ADVERTISEMENT

ಸುರೇಶ ಅಂಗಡಿ ನಾಮಪತ್ರ ಸಲ್ಲಿಕೆ ಇಂದು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2014, 8:31 IST
Last Updated 24 ಮಾರ್ಚ್ 2014, 8:31 IST

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಸುರೇಶ ಅಂಗಡಿ ಅವರು ಮಾ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ನಗರದ ಸಮಾದೇವಿ ಗಲ್ಲಿಯಲ್ಲಿ ಸಮಾದೇವಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಅವರು, ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಖಡೇ ಬಜಾರ್‌, ಕಾಕತಿವೇಸ್ ರಸ್ತೆ ಮಾರ್ಗವಾಗಿ ರಾಣಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹೆಬ್ಬಾಳ್ಕರ ನಾಮಪತ್ರ ಸಲ್ಲಿಕೆ ಇಂದು
ಬೆಳಗಾವಿ: 
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ ಅವರು ಸೋಮವಾರ (ಮಾ. 24) ಬೆಳಿಗ್ಗೆ 11 ಗಂಟೆಗೆ ಪಕ್ಷದ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿಯ ಅಶೋಕ ವೃತ್ತದಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಫಿರೋಜ್‌ ಸೇಠ್‌, ಅಶೋಕ ಪಟ್ಟಣ, ರಮೇಶ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯರಾದ ವೀರಕುಮಾರ ಪಾಟೀಲ, ಮಹಾಂತೇಶ ಕೌಜಲಗಿ, ಸುಭಾಷ ಕೌಜಲಗಿ ಮತ್ತಿತರ ಮುಖಂಡರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಹುಕ್ಕೇರಿ ನಾಮಪತ್ರ ಸಲ್ಲಿಕೆ 26ರಂದು
ಚಿಕ್ಕೋಡಿ: 
ಚಿಕ್ಕೋಡಿ ಲೋಕಸಭೆ ಮತಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ಪ್ರಕಾಶ ಹುಕ್ಕೇರಿ ಇದೇ 26 ರಂದು ಬೆಳಿಗ್ಗೆ 10ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಚಿಕ್ಕೋಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ ಕುಲಕರ್ಣಿ ತಿಳಿಸಿದ್ದಾರೆ.

ಶ್ರೀಮಂತ ನಾಮಪತ್ರ ನಾಳೆ
ಚಿಕ್ಕೋಡಿ: 
ಚಿಕ್ಕೋಡಿ ಲೋಕಸಭೆ ಮತಕ್ಷೇತ್ರಕ್ಕೆ ಜಾತ್ಯಾತೀತ ಜನತಾದಳ ಅಭ್ಯರ್ಥಿಯಾಗಿ ಶ್ರೀಮಂತ ಪಾಟೀಲ ಇದೇ 25 ರಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವರು ಎಂದು ಚಿಕ್ಕೋಡಿ ಬ್ಲಾಕ್‌ ಜೆಡಿಎಸ್‌ ಅಧ್ಯಕ್ಷ ದಯಾನಂದ ಮಠಪತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.