ADVERTISEMENT

ಸೇವಾ ಶುಲ್ಕ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 9:35 IST
Last Updated 14 ಫೆಬ್ರುವರಿ 2012, 9:35 IST
ಸೇವಾ ಶುಲ್ಕ ವಿರುದ್ಧ ಬಿಜೆಪಿ ಪ್ರತಿಭಟನೆ
ಸೇವಾ ಶುಲ್ಕ ವಿರುದ್ಧ ಬಿಜೆಪಿ ಪ್ರತಿಭಟನೆ   

ಬೆಳಗಾವಿ: ನಗರದ ಕಂಟೋನ್ಮೆಂಟ್ ಪ್ರದೇಶಗಳಲ್ಲಿ ವಾಹನಗಳಿಗೆ ಸೇವಾ ಶುಲ್ಕ ವಿಧಿಸುವುದನ್ನು ಖಂಡಿಸಿ ಬಿಜೆಪಿ ಮಹಾನಗರ ಜಿಲ್ಲಾ ಘಟಕ ಆಶ್ರಯದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು, ಕಂಟೋನ್ಮೆಂಟ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಸೇವಾ ಶುಲ್ಕ ವಸೂಲಿ ಮಾಡಲು ಟೋಲ್ ನಾಕಾ ನಿರ್ಮಿಸಿದರೆ, ನಗರದಲ್ಲಿ ಸಂಚಾರ- ಸಾಗಾಟದ ಸಮಸ್ಯೆ ಉದ್ಭವವಾಗುತ್ತದೆ.
 
ನಗರದಲ್ಲಿ ದಿನೇ ದಿನೇ ಸಂಚಾರ ದಟ್ಟಣೆ ಹೆಚ್ಚುತ್ತಿರುವುದರಿಂದ ಟ್ರಾಫಿಕ್ ಜಾಮ್ ಆಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಿಜೆಪಿ ಮಹಾನಗರ ಜಿಲ್ಲಾ ಘಟಕ ಅಧ್ಯಕ್ಷ ಎಂ.ಬಿ. ಝಿರಲಿ, “ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಸೇವಾ ಶುಲ್ಕ ಪಡೆಯುವುದರಿಂದ ಜನಸಾಮಾನ್ಯರ ಹಣ ಹಾಗೂ ಸಮಯ ಎರಡೂ ಹಾಳಾಗುತ್ತದೆ. ಹೀಗಾಗಿ ಈ ನಿರ್ಧಾರವನ್ನು ಮಂಡಳಿಯು ಬದಲಾಯಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಾಂತಾ ಉಪ್ಪಾರ, ನಂದು ಮಿರಜಕರ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.