ADVERTISEMENT

ಹಿರೇಬಾಗೇವಾಡಿ | ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 5:36 IST
Last Updated 9 ಫೆಬ್ರುವರಿ 2026, 5:36 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಹಿರೇಬಾಗೇವಾಡಿ: ಲಾರಿ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಘಟನೆ ಭಾನುವಾರ ಸಂಜೆ ಇಲ್ಲಿನ ಬಸವನಗರದ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಜರುಗಿದೆ.

ಮಚ್ಚೆ ಗ್ರಾಮದ ವಿಠ್ಠಲ ಮುತ್ತಪ್ಪ ನಾಟೇಕರ (37) ಮೃತ ಬೈಕ್ ಚಾಲಕ. ಹಿಂಬದಿ ಸವಾರ ಸುನಿಲ ನಿರ್ವಾಣಿ(36) ಗಾಯಗೊಂಡವರು. ಬೆಳಗಾವಿ ಕಡೆಯಿಂದ ಬರುತ್ತಿದ್ದ ಲಾರಿಯು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ಎದುರಿನಿಂದ ಬಂದ ದ್ವಿಚಕ್ರ ವಾಹನ ಸವಾರ ಹಿಂದಿನ ಚಕ್ರದಲ್ಲಿ ಸಿಕ್ಕು ಮೃತಪಟ್ಟಿದ್ದಾನೆ. ಹಿಂಬದಿಯ ಸವಾರನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.