ADVERTISEMENT

ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 6:45 IST
Last Updated 3 ಏಪ್ರಿಲ್ 2013, 6:45 IST

ಬೆಳಗಾವಿ: ಮತದಾರರ ಗುರುತಿನ ಚೀಟಿಗಳನ್ನು ಸರಿಯಾಗಿ ಹಂಚುವಂತೆ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರ ದಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರು ಮಂಗಳವಾರ ಹೆಚ್ಚುವರಿ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಿದರು.

ಅರ್ಹ ಮತದಾರರು ಅರ್ಜಿ ನಮೂನೆ 6ರಲ್ಲಿ ಭರ್ತಿ ಮಾಡಿ ವಿವಿಧ ದಾಖಲೆಗಳೊಂದಿಗೆ ಪ್ರಾಥಮಿಕ ಶಾಲೆಗಳ ಮೂಲಕ ಮಹಾನಗರ ಚುನಾವಣಾಧಿಕಾರಿಗೆ ಸಲ್ಲಿಸಿದ್ದಾರೆ. ಮತದಾರರ ಗುರುತಿನ ಚೀಟಿಗಳು ಬಂದಿದ್ದು, ಅವುಗಳನ್ನು ಸರಿಯಾಗಿ ವಿತರಣೆ ಮಾಡಲು ಕ್ರಮ ತೆಗೆದು ಕೊಳ್ಳಬೇಕು ಎಂದು ಆಗ್ರಹಿಸಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಅನುಕೂಲ ವಾಗುವಂತೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಕೆಜೆಪಿ ಜಿಲ್ಲಾ ಅಧ್ಯಕ್ಷ ನೀಲಕಂಠ ಮಾಸ್ತಮರ್ಡಿ, ಬಿ.ಜೆ.ಪೂಜಾರ, ಗಜು ಧರನಾಯಿಕ, ಮಲ್ಲಿಕಾರ್ಜುನ ಸತ್ತಿಗೇರಿ, ಅಶೋಕ ದೇಶಪಾಂಡೆ, ದಿನೇಶ ವಾಲ್ವೇಕರ್, ಸುಧಾಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.