ಸಂಕೇಶ್ವರ: ‘ಕೃಷಿ ವಿಷಯದಲ್ಲಿ ನಡೆಯುತ್ತಿರುವ ಸಂಶೋಧನೆಗಳು ರೈತರಿಗೆ ನೆರವಾಗುವ ಮೂಲಕ ಗ್ರಾಮೀಣ ಜನರ ಆರ್ಥಿಕ ಮಟ್ಟ ಸುಧಾ ರಿಸುವಂತಾಗಬೇಕು’ ಎಂದು ಮಾಜಿ ಸಚಿವ ಎ.ಬಿ.ಪಾಟೀಲ ಹೇಳಿದರು.
ಸಂಕೇಶ್ವರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಘಟಕ ಹುಕ್ಕೇರಿ ಹಾಗೂ ವಿವಿಧ ಸಹಕಾರಿ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಕೃಷಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾ ರಗಳು ಕೃಷಿಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿವೆ. ಆದರೆ ಅವುಗಳು ಎಷ್ಟರ ಮಟ್ಟಿಗೆ ರೈತರನ್ನು ತಲುಪಿವೆ ಎಂಬುದರ ಬಗೆಗೆ ಆತ್ಮವಿ ಮರ್ಶೆ ನಡೆಯಬೇಕಾಗಿದೆ. ಮಧ್ಯಪಾನ ನಿಷೇಧ ಮಾಡುವಲ್ಲಿ ಮಹಿಳೆಯರು ಮುಂಚೂಣಿವಹಿಸ ಬೇಕು, ತ್ಯಾಜ್ಯ ನೀರಿನ ಸಮರ್ಪಕ ಬಳಕೆ ಮಾಡಬೇಕು ಎಂದರು.
ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ನಿಡಸೋಸಿ ಮಠದ ಪಂಚಮ ಶಿವಲಿಂ ಗೇಶ್ವರ ಸ್ವಾಮೀಜಿ ಮಾತನಾಡಿ, ಕೃಷಿಯಿಂದ ವಿಮುಖರಾಗುತ್ತಿರುವ ಯುವಕರನ್ನು ಮತ್ತೆ ಕೃಷಿಯತ್ತ ಬರಲು ಪ್ರೇರಣೆ ನೀಡುವ ವಾತಾವರಣ ನಿರ್ಮಾಣವಾಗಬೇಕು ಎಂದರು.
ಕರ್ನಾಟಕ ಪ್ರದೇಶ ಕೃಷಿಕ ಸಮಾ ಜದ ಅಧ್ಯಕ್ಷ ಬಾಳಪ್ಪಾ ಬೆಳಕೂಡ, ಹಿರಿಯ ಸಹಕಾರಿ ಧುರೀಣ ಶಿವ ನಾಯಿಕ ನಾಯಿಕ ಮಾತನಾಡಿದರು.
ಯೋಜನೆಯ ನಿರ್ದೇಶಕ ಶೀನಪ್ಪಾ. ಎಂ ಅವರು ಬೆಳಗಾವಿ ಜಿಲ್ಲೆಯಲ್ಲಿ ಯೋಜನೆಯ ಸಾಧನೆಗಳನ್ನು ವಿವರಿಸಿದರು. ಸುರೇಶ ಸಾಲಿಯಾನ ಸ್ವಾಗತಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ ಕೃಷಿ ಮೇಳದ ಉದ್ದೇಶ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.