ADVERTISEMENT

ಕೋರೆಗೆ ಅಮೆರಿಕ ವಿ.ವಿ. ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 26 ಮೇ 2022, 13:00 IST
Last Updated 26 ಮೇ 2022, 13:00 IST
ಬೆಳಗಾವಿಯ ಕೆಎಲ್‌ಇ ಸೊಸೈಟಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಅಮೆರಿಕದ ಫಿಲಾಡೆಲ್ಫಿಯಾದ ಥಾಮಸ್ ಜೆಫರ್‌ಸನ್‌ ವಿಶ್ವವಿದ್ಯಾಲಯದ ಅಧ್ಯಕ್ಷ ಹಾಗೂ ಸಿಇಒ ಎಚ್. ರಿಚರ್ಡ್ ಹ್ಯಾವರ್‌ಸ್ಟಿಕ್ ‘ಡಾಕ್ಟರ್ ಆಫ್‌ ಸೈನ್ಸ್‌’ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು

ಬೆಳಗಾವಿ: ಇಲ್ಲಿನ ಕೆಎಲ್‌ಇ ಸೊಸೈಟಿ ಕಾರ್ಯಾಧ್ಯಕ್ಷ ಮತ್ತು ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಾಧಿಪತಿ ಪ್ರಭಾಕರ ಕೋರೆ ಅವರಿಗೆ ಅಮೆರಿಕದ ಫಿಲಾಡೆಲ್ಫಿಯಾದ ಥಾಮಸ್ ಜೆಫರ್‌ಸನ್‌ ವಿಶ್ವವಿದ್ಯಾಲಯದಿಂದ ‘ಡಾಕ್ಟರ್ ಆಫ್‌ ಸೈನ್ಸ್‌’ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗಿದೆ.

ಅವರು ಶಿಕ್ಷಣ ಮತ್ತು ಆರೋಗ್ಯ ಸೇವಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಬುಧವಾರ ಅಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವಿಸಲಾಗಿದೆ.

‘ಥಾಮಸ್ ಜೆಫರ್‌ಸನ್ ವಿಶ್ವವಿದ್ಯಾಲಯದ ಅಧ್ಯಕ್ಷ ಹಾಗೂ ಸಿಇಒ ಎಚ್. ರಿಚರ್ಡ್ ಹ್ಯಾವರ್‌ಸ್ಟಿಕ್, ವಿಶ್ವವಿದ್ಯಾಲಯದ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥ ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡಾ.ಮಾರ್ಕ್ ಎಲ್. ಟೈಕೋಸಿನಸ್ಕಿ ಪ್ರದಾನ ಮಾಡಿದ್ದಾರೆ. ಅಮೆರಿಕದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯದಿಂದ ಈ ಪದವಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಕೋರೆ ಅವರದಾಗಿದೆ’ ಎಂದು ಕೆಎಲ್‌ಇ ಸಂಸ್ಥೆಯ ‍ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.