ADVERTISEMENT

ನಿಪ್ಪಾಣಿ ತಾಲ್ಲೂಕು ಕ್ರೀಡಾಂಗಣಕ್ಕೆ 10 ಎಕರೆ 20 ಗುಂಟೆ ಜಾಗ: CM ಸಿದ್ಧರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 14:16 IST
Last Updated 6 ಮಾರ್ಚ್ 2025, 14:16 IST
ಸಿದ್ಧರಾಮಯ್ಯ
ಸಿದ್ಧರಾಮಯ್ಯ   

ನಿಪ್ಪಾಣಿ: ‘ನಿಪ್ಪಾಣಿ ನಗರಸಭೆ ವ್ಯಾಪ್ತಿಯ ನಾಗನೂರ ಗ್ರಾಮದ ರಿ.ಸ.ನಂ.14 ರಲ್ಲಿಯ 10 ಎಕರೆ 20 ಗುಂಟೆ ನಿವೇಶನವನ್ನು ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಗುರುತಿಸಿದ್ದು ಯುವ ಸಬಲೀಕರಣ ಮತ್ತು ಇಲಾಖೆಗೆ ಹಸ್ತಾಂತರಿಸಿಕೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮುಖ್ಯಮಂತ್ರಿ ಅವರಿಗೆ ‘ನಿಪ್ಪಾಣಿ ತಾಲ್ಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು 2 ವರ್ಷಗಳ ಹಿಂದೆಯೇ ಜಾಗವು ಮಂಜೂರಾಗಿದ್ದರೂ ಕೂಡ ಇಲ್ಲಿಯವರೆಗೆ ನಿರ್ಮಾಣ ಮಾಡದೇ ಇರುವುದರಿಂದ ತೊಂದರೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಇಲ್ಲಿಯವರೆಗೆ ಕಾರಣಗಳೇನು. ಬಂದಿದ್ದಲ್ಲಿ ಕ್ರೀಡಾಂಗಣವನ್ನು ಮಾಡದಿರಲು ಕಾರಣಗಳೇನು?’ ಎಂದು ಪ್ರಶ್ನಿಸಿದ್ದರು.

ಶಾಸಕಿ ಶಶಿಕಲಾ ಜೊಲ್ಲೆ

ADVERTISEMENT

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮುಂದುವರೆದ ಹಾಗೂ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ. ಅನುದಾನ ಲಭ್ಯತೆ ಮೇರೆಗೆ ನಿಪ್ಪಾಣಿ ತಾಲ್ಲೂಕು ಕ್ರೀಡಾಂಗಣವನ್ನು ಹಂತ ಹಂತವಾಗಿ ಅಭಿವೃದ್ದಿಪಡಿಸಲು ಪರಿಗಣಿಸಲಾಗುವುದು ಸಿದ್ದರಾಮಯ್ಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.