ಬೆಳಗಾವಿಯಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಜನಪರ ಕಾರ್ಯಕ್ರಮಗಳನ್ನು ಪರಿಚಯಿಸುವ 10 ಕಿರು ಹೊತ್ತಿಗೆಗಳನ್ನು ಗುರುವಾರ ಬಿಡುಗಡೆ ಮಾಡಿದರು.
ಬೆಳಗಾವಿ (ಸುವರ್ಣ ವಿಧಾನಸೌಧ): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಜನಪರ ಕಾರ್ಯಕ್ರಮಗಳನ್ನು ಪರಿಚಯಿಸುವ ಸಲುವಾಗಿ ‘ಪ್ರಜಾವಾಣಿ’ ಹೊರತಂದ 10 ಕಿರು ಹೊತ್ತಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣ ವಿಧಾನಸೌಧದಲ್ಲಿ ಗುರುವಾರ ಬಿಡುಗಡೆ ಮಾಡಿದರು.
ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಹೊರತಂದ ಈ ಕಿರು ಹೊತ್ತಿಗೆಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳು, ಯೋಜನೆಗಳು ಮತ್ತು ಪ್ರಯೋಜನಗಳ ಕುರಿತ ಸಮಗ್ರ ಮಾಹಿತಿ ಇದೆ. ಉಪಯುಕ್ತ ಮಾಹಿತಿಯನ್ನು ಜನರಿಗೆ ತಲುಪಿಸುವ ಪ್ರಯತ್ನ ‘ಪ್ರಜಾವಾಣಿ’ ಮಾಡಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು.ಟಿ. ಖಾದರ್, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ರಾಜ್ಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ. ಅಜಯ ಸಿಂಗ್, ಶಾಸಕ ವಿಜಯಾನಂದ ಕಾಶಪ್ಪನವರ ಸಾಕ್ಷಿಯಾದರು.
ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಟಿಪಿಎಂಎಲ್ ಜಾಹೀರಾತು ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಂಜುಳಾ ಮೆನನ್, ಸಹಾಯಕ ಪ್ರಧಾನ ವ್ಯವಸ್ಥಾಪಕ ದಿವಾಕರ ಭಟ್ ಮತ್ತು ಮುಖ್ಯ ವರದಿಗಾರ ವೈ.ಗ.ಜಗದೀಶ್ ಜೊತೆಯಾದರು.
ಪ್ರಕಟಿಸಿದ ಕಿರು ಹೊತ್ತಿಗೆಗಳು
ಗ್ರಾಮ ಪಂಚಾಯಿತಿ ಒಂದು ಪ್ರಜಾಸತ್ತಾತ್ಮಕ ಸಂಸ್ಥೆ
ಹೊಸತನದ ಹಾದಿಯಲ್ಲಿ– ಕಲಬುರಗಿ ಜಿಲ್ಲೆ (ಸಚಿವ ಪ್ರಿಯಾಂಕ್ ಖರ್ಗೆ)
ಗ್ರಾಮಸ್ಥರ ಜೀವನ ಮತ್ತು ಜೀವನೋಪಾಯಕ್ಕೆ ಅಡಿಪಾಯ– ಕೆಆರ್‌ಐಡಿಎಲ್
ಉದ್ಯೋಗ ಬದುಕು ಖಾತ್ರಿ–ನರೇಗಾ
ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ–ದಶಕದ ಸಾಧನೆ ಮೈಲಿಗಲ್ಲು (ಆರ್‌ಡಬ್ಲ್ಯುಎಸ್)
ಆಸ್ತಿ ತೆರಿಗೆ– ಡಿಜಿಟಲ್ ಪಾವತಿಗೆ ಉತ್ತೇಜನ
ಸಾಮಾಜಿಕ ಪರಿಶೋಧನೆ– ಉದ್ಯೋಗ ಖಾತ್ರಿಯ ಪರಿಣಾಮಕಾರಿ ಅನುಷ್ಠಾನದ ಸಾಧನ
ಗ್ರಾಮೀಣ ರಸ್ತೆಗಳು ದೇಶದ ಬೆನ್ನೆಲುಬು–ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ
ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ– ಕರ್ನಾಟಕ ಸರ್ಕಾರದಿಂದ ನಿರ್ಮಲ ಗ್ರಾಮ ಯೋಜನೆ
ಗ್ರಾಮೀಣ ಶಿಕ್ಷಣದಲ್ಲಿ ಗ್ರಂಥಾಲಯಗಳ ಪಾತ್ರ– ಓದುವ ಬೆಳಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.