ADVERTISEMENT

ಬೆಳಗಾವಿ: 106 ಪೊಲೀಸರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 13:48 IST
Last Updated 21 ಜನವರಿ 2022, 13:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಳಗಾವಿ: ‘‍ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ 106 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅವರೆಲ್ಲರೂ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪೊಲೀಸರು ಕರ್ತವ್ಯದ ವೇಳೆ ಜನರೊಂದಿಗೆ ನೇರವಾಗಿ ಸಂಪರ್ಕಕ್ಕೆ ಬರುತ್ತಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ’ ಎಂದರು.

‘ಕಮಿಷನರೇಟ್ ವ್ಯಾಪ್ತಿಯಲ್ಲಿ 1,400ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದಾರೆ. ಅದರಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೋವಿಡ್ ಪಾಸಿಟಿವ್ ಬಂದವರಲ್ಲಿ ಕೆಲವರಿಗೆ ಮಾತ್ರವೇ ರೋಗದ ಲಕ್ಷಣಗಳಿವೆ. ಉಳಿದವರಲ್ಲಿ ಲಕ್ಷಣಗಳು ಕಂಡು ಬಂದಿಲ್ಲ. ಯಾರಿಗಾದರೂ ಗಂಭೀರ ಸಮಸ್ಯೆ ಎದುರಾದಲ್ಲಿ ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆಗೆ ವ್ಯವಸ್ಥೆಗೆ ಸಿದ್ಧವಿದ್ದೇವೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.