ADVERTISEMENT

ದೋಷಪೂರಿತ ಸೈಲೆನ್ಸರ್‌ ಅಳವಡಿಕೆ: 12 ದ್ವಿಚಕ್ರ ವಾಹನಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 7:55 IST
Last Updated 19 ಅಕ್ಟೋಬರ್ 2021, 7:55 IST
ಬೆಳಗಾವಿ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ದ್ವಿಚಕ್ರವಾಹನಗಳು
ಬೆಳಗಾವಿ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ದ್ವಿಚಕ್ರವಾಹನಗಳು   

ಬೆಳಗಾವಿ: ದೋಷಪೂರಿತ ಸೈಲೆನ್ಸರ್‌ಗಳನ್ನು ಅಳವಡಿಸಿದ್ದ (ಮಾಡಿಫೈಡ್) 12 ದ್ವಿಚಕ್ರವಾಹನಗಳನ್ನು ಉತ್ತರ ಸಂಚಾರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

‘ದೋಷಪೂರಿತ ಸೈಲೆನ್ಸರ್ ಅಳವಡಿಸಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 12 ಸವಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ. ದ್ವಿಚಕ್ರವಾಹನಗಳನ್ನು ಆರ್‌ಟಿಒ ವಶಕ್ಕೆ ಕೊಡಲಾಗಿವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಠಿಣ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಕಾರ್ಯಾಚರಣೆ ಮುಂದುವರಿಸಲಾಗುವುದು’ ಎಂದು ಡಿಸಿಪಿ ಪಿ.ವಿ. ಸ್ನೇಹಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT