ADVERTISEMENT

120 ಕೆ.ಜಿ. ಗಾಂಜಾ ಗಿಡ ವಶ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 14:07 IST
Last Updated 5 ಸೆಪ್ಟೆಂಬರ್ 2020, 14:07 IST
ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಜಮೀನಿನಲ್ಲಿ ಆಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಕುಡಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ
ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಜಮೀನಿನಲ್ಲಿ ಆಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಕುಡಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ   

ಬೆಳಗಾವಿ: ರಾಯಬಾಗ ತಾಲ್ಲೂಕು ಸುಟ್ಟಟ್ಟಿ ಗ್ರಾಮದ ಜಮೀನೊಂದರಲ್ಲಿ ಕಬ್ಬಿನ ಬೆಳೆಯ ಮಧ್ಯದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಕುಡಚಿ ಠಾಣೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಲಕ್ಕಪ್ಪ ಸತ್ಯಪ್ಪ ಖೋತ ಮತ್ತು ಲಕ್ಷ್ಮಣ ಲಕ್ಕಪ್ಪ ಖೋತ ಬಂಧಿತ ಆರೋಪಿಗಳು.

‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. 120 ಕೆ.ಜಿ. ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪಿಎಸ್‌ಐ ಶಿವರಾಜ ಧರಿಗೋಣ, ಸಿಬ್ಬಂದಿ ಪಿ.ಎಲ್. ಖವಟಕೊಪ್ಪ, ಕೆ.ಆರ್. ಸಾಳೋಂಕೆ, ಆನಂದ ತೇರದಾಳ, ಎಚ್.ಎಸ್. ಗುಡ್ಡದ, ಆನಂದ ಪೂಜೇರಿ, ಎ.ಎ. ಮುದ್ನಾಳ, ಎಂ.ಕೆ. ಯಲ್ಲಟ್ಟಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.