ADVERTISEMENT

ಬೆಳಗಾವಿ: 136 ಮಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 14:12 IST
Last Updated 23 ಆಗಸ್ಟ್ 2020, 14:12 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 136 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಭಾನುವಾರ ತಿಳಿಸಿದೆ.

ಇವರಲ್ಲಿ ಕೆಲವರು ಬಾಗಲಕೋಟೆ, ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಯವರೂ ಇದ್ದಾರೆ.

ಈ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 70 ಹಾಗೂ 74 ವಯಸ್ಸಿನ ಅವರಿಗೆ ತೀವ್ರ ಉಸಿರಾಟದ ಕೊರತೆ ಇತ್ತು. ಅವರು ಹುಕ್ಕೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರು ಎಂದು ಮಾಹಿತಿ ನೀಡಿದೆ.

ADVERTISEMENT

134 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 9 ಮಂದಿ ತೀವ್ರ ನಿಗಾ ಘಟಕ (ಐಸಿಯು)ದಲ್ಲಿದ್ದಾರೆ.

ಶನಿವಾರ 312 ಮಂದಿಗೆ ಸೋಂಕು ದೃಢಪಟ್ಟಿತ್ತು. ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಥಣಿ, ಗೋಕಾಕ ಹಾಗೂ ಬೆಳಗಾವಿ ತಾಲ್ಲೂಕಿನವರಾದ ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 511 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.