ADVERTISEMENT

ಬೈಲಹೊಂಗಲ: ₹10 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನ ವಶ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2024, 15:47 IST
Last Updated 8 ಡಿಸೆಂಬರ್ 2024, 15:47 IST
ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ಹಲವು ಕಡೆ ದ್ವಿಚಕ್ರ ವಾಹನ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಡಿವೈಎಸ್ಪಿ ರವಿ ನಾಯಕ, ಸಿಪಿಐ ಪಂಚಾಕ್ಷರಿ ಸಾಲಿಮಠ ನೇತೃತ್ವದಲ್ಲಿ ಪೊಲೀಸರು ಭಾನುವಾರ ಬಂಧಿಸಿ ಅವರಿಂದ ದ್ವಿಚಕ್ರ ವಾಹನಗಳನ್ನು ವಶ ಪಡೆದಿದ್ದಾರೆ

ಬೈಲಹೊಂಗಲ: ಬೈಲಹೊಂಗಲ ಪೊಲೀಸ್ ಠಾಣೆ ಸೇರಿದಂತೆ ಹಲವು ಕಡೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದ ನಾಲ್ಕು ಜನ ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿ, ₹10 ಲಕ್ಷ ರೂ.ಮೌಲ್ಯದ ವಿವಿಧ ಕಂಪನಿಯ 14 ದ್ವಿಚಕ್ರ ವಾಹನಗಳನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ‌.

ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಅಭಿಷೇಕ ಬಾಬು ಹೊಸಟ್ಟಿ, ಸಚಿನ ಈರಪ್ಪ ಬಡಿಗೇರ, ಅಭಿಷೇಕ ಸುರೇಶ ಪಾರಿಶ್ವಾಡ, ಸಂದೀಪ ಈರಪ್ಪ ಬಡಿಗೇರ ಬಂಧಿತರು.

ಡಿ.6 ರಂದು ಬೆಳಗಾವಿ ರಸ್ತೆಯಲ್ಲಿ ಕಳವು‌ ಮಾಡಿದ್ದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಕಳ್ಳತನ ಪ್ರಕರಣ ಬೆಳೆಕಿಗೆ ಬಂದಿದೆ. ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.