ಬೆಳಗಾವಿ: ‘ಕೊರೊನಾ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮೇ 12ರ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏ. 21ರ ರಾತ್ರಿ 9 ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೋವಿಡ್ ಪ್ರಕರಣಗಳಲ್ಲಿ ಪ್ರತಿ ದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಅವಶ್ಯ ಹಾಗೂ ತಾಲ್ಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ಅಂಗವಿಲಕರು ನೋಂದಣಿಗೆ ಸಲಹೆ
ಬೆಳಗಾವಿ: ಜಿಲ್ಲೆಯಲ್ಲಿ 18 ವರ್ಷ ಮೇಲಿನ ಅಂಗವಿಕಲರು ಕೋವಿಡ್ ಲಸಿಕೆ ಪಡೆಯುವುದಕ್ಕಾಗಿ ‘Co- WIN’ ಆ್ಯಪ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಸಹಾಯ ಯೋಜನಾಧಿಕಾರಿ, ಹಿರಿಯ ಮೇಲ್ವಿಚಾರಕಿಯರು ಅಥವಾ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯು) ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.