ADVERTISEMENT

ಸುವರ್ಣ ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 16:59 IST
Last Updated 24 ಸೆಪ್ಟೆಂಬರ್ 2021, 16:59 IST

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಚಿಕ್ಕಪುಟ್ಟ ವಿಷಯಗಳಿಗೆ ಪದೇ ಪದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲೂ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಸೌಧದ ಪಶ್ಚಿಮ ದಿಕ್ಕಿನ ಮುಖ್ಯ ಗೇಟ್ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ-4 ಇದೆ. ಅಲ್ಲಿ ಭಾರಿ ಮತ್ತು ಲಘು ವಾಹನಗಳು ವೇಗವಾಗಿ ಚಲಿಸುತ್ತಿರುತ್ತವೆ. ಹೆಚ್ಚಿನ ಅಪಘಾತಗಳು ನಡೆಯುವ ಪ್ರದೇಶವೂ ಇದಾಗಿದೆ. ಪ್ರತಿಭಟನೆಗಳು ನಡೆದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಬಹಳ ತೊಂದರೆ ಆಗುತ್ತದೆ. ಸುತ್ತಲಿನ ಹಲಗಾ, ಬಸ್ತವಾಡ, ಕೆ.ಕೆ. ಕೊಪ್ಪ ಹಾಗೂ ಕೆಲವು ಗ್ರಾಮಗಳು ಭಾಷಾ ಮೇಲೆ ಸೂಕ್ಷ್ಮ ಪ್ರದೇಶಗಳಾಗಿವೆ. ಹೀಗಾಗಿ ಸೆ.24ರಿಂದ ಅ.23ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.