ADVERTISEMENT

ಬಾಗಲಕೋಟೆಯ 2,054 ಮಕ್ಕಳಿಗೆ ಕೋವಿಡ್: ನಿರಾಣಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:22 IST
Last Updated 10 ಜೂನ್ 2021, 17:22 IST

ಬೆಳಗಾವಿ: ‘ಬಾಗಲಕೋಟೆ ಜಿಲ್ಲೆಯಲ್ಲಿ 2,054 ಮಕ್ಕಳಿಗೆ ಕೋವಿಡ್ ದೃಢಪಟ್ಟಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಇಲ್ಲಿ ‍ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಪ್ರಮಾಣ ಶೂನ್ಯವಿದೆ. ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವ ಕಾರಣ ಸಾವು ಸಂಭವಿಸಿಲ್ಲ. ಸೋಂಕಿಗೆ ಒಳಗಾದ ಎಲ್ಲ ಮಕ್ಕಳೂ ಚೇತರಿಸಿಕೊಂಡಿದ್ದಾರೆ’ ಎಂದರು.

‘ಗ್ರಾಮೀಣ ಭಾಗದಲ್ಲಿ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ವೈದ್ಯರ ನಡೆ ಹಳ್ಳಿ ಕಡೆ ಅಭಿಯಾನವನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.