ADVERTISEMENT

ಹಂದಿಗುಂದ: 22 ಮಂದಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 16:37 IST
Last Updated 19 ಡಿಸೆಂಬರ್ 2020, 16:37 IST

ಹಂದಿಗುಂದ: ‘ಹಂದಿಗುಂದ ಗ್ರಾಮ‌ ಪಂಚಾಯಿತಿ ಚುನಾವಣೆಯಲ್ಲಿ ಐದು ವಾರ್ಡ್‌ಗಳಲ್ಲಿ 22 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಹಿರಿಯರ ಸಮುಖದಲ್ಲಿ ಸಲಹಾ ಸಮಿತಿ ರಚಿಸಿ, ಅವರ ಮಾರ್ಗದರ್ಶನದಲ್ಲಿ ಜನಪರ ಕಾರ್ಯಗಳನ್ನು ಮಾಡುವ ಹಿನ್ನೆಲೆಯಲ್ಲಿ ಚರ್ಚೆ ನಡೆಯಿತು. ಇದಕ್ಕೆ ಸಮ್ಮತಿಸಿದ 39 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಶನಿವಾರ ಹಿಂದಕ್ಕೆ ಪಡೆದಿದ್ದಾರೆ.

ಹಂದಿಗುಂದ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 61 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇವರ ಪೈಕಿ 39 ಮಂದಿ ಕಣದಿಂದ ಹಿಂದೆ ಸರಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.