ADVERTISEMENT

ಬೆಳಗಾವಿ: ಮತ್ತೆ 229 ಮಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 16:05 IST
Last Updated 6 ಆಗಸ್ಟ್ 2020, 16:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 229 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.

ಸವದತ್ತಿ ತಾಲ್ಲೂಕಿನ ಚಚಡಿಯಲ್ಲಿ 23, ಬೆಳಗಾವಿ ನಗರದ ವಿವಿಧೆಡೆ ಹಾಗೂ ತಾಲ್ಲೂಕಿನಲ್ಲಿ, ಹುಕ್ಕೇರಿ, ಚಿಕ್ಕೋಡಿ, ಬೈಲಹೊಂಗಲ, ಗೋಕಾಕ, ರಾಯಬಾಗ ತಾಲ್ಲೂಕುಗಳಲ್ಲಿ ಸೋಂಕು ವರದಿಯಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಲ್ಲೂಕಿನ 52 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಾವಿಗೀಡಾಗಿದ್ದಾರೆ. ಆ.4ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.

ADVERTISEMENT

44 ಮಂದಿ ಗುಣಮುಖರಾಗಿದ್ದು, ಅವರನ್ನು ಇಲ್ಲಿನ ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.