ADVERTISEMENT

ಬೆಳಗಾವಿ ವಿಮಾನ ನಿಲ್ದಾಣ ನವೀಕರಣಕ್ಕೆ ₹230 ಕೋಟಿ: ಕಡಾಡಿ 

​ಪ್ರಜಾವಾಣಿ ವಾರ್ತೆ
Published 9 ಜುಲೈ 2023, 14:55 IST
Last Updated 9 ಜುಲೈ 2023, 14:55 IST
ಈರಣ್ಣ ಕಡಾಡಿ, ರಾಜ್ಯಸಭಾ ಸದಸ್ಯ
ಈರಣ್ಣ ಕಡಾಡಿ, ರಾಜ್ಯಸಭಾ ಸದಸ್ಯ   

ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ₹230 ಕೋಟಿ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆಗೆ ಜಾರಿಗೊಳಿಸಲಾಗಿದೆ ಎಂದು  ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರಯಾಣಿಕರ ಟರ್ಮಿನಲ್ ಕಟ್ಟಡದ ವಿಸ್ತರಣೆ, ಮೂರು ಏರೋಬ್ರಿಡ್ಜ್‌ಗಳು ಹಾಗೂ ಏರೋಕ್ರಾಪ್ಟ್ ನಿಲ್ದಾಣ, ವಾಹನ ಪಾರ್ಕಿಂಗ್ ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಕೇವಲ 36 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣ ವಿಸ್ತರಣೆ ನಿರ್ಣಯ ಕೈಗೊಂಡ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಶ್ಲಾಘಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.