ADVERTISEMENT

ಬೆಳಗಾವಿ: 263 ಮಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 14:06 IST
Last Updated 4 ಆಗಸ್ಟ್ 2020, 14:06 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 263 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,948ಕ್ಕೆ ಏರಿಕೆಯಾಗಿದೆ.

ತಾಲ್ಲೂಕಿನ 44 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ.

ಸೋಂಕಿತರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. 28 ಮಂದಿ ಗುಣಮುಖರಾಗಿದ್ದು ಅವರನ್ನು ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.