ADVERTISEMENT

ಮೂವರ ಬಂಧನ; ₹ 20 ಲಕ್ಷ ಮೌಲ್ಯದ ಅಫೀಮು ವಶ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 8:42 IST
Last Updated 19 ಫೆಬ್ರುವರಿ 2021, 8:42 IST
ಬೆಳಗಾವಿಯಲ್ಲಿ ದಾಳಿ ನಡೆಸಿದ ಸಿಇಎನ್‌ ಅಪರಾಧ ಠಾಣೆ ಪೊಲೀಸರು, ಮಾದಕ ಪದಾರ್ಥ ಅಫೀಮನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ
ಬೆಳಗಾವಿಯಲ್ಲಿ ದಾಳಿ ನಡೆಸಿದ ಸಿಇಎನ್‌ ಅಪರಾಧ ಠಾಣೆ ಪೊಲೀಸರು, ಮಾದಕ ಪದಾರ್ಥ ಅಫೀಮನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ   

ಬೆಳಗಾವಿ: ತಾಲ್ಲೂಕಿನ ಹೊನಗಾದ ಪಿ.ಬಿ. ರಸ್ತೆಯ ಧಾಬಾವೊಂದರ ಪಾನ್‌ಶಾಪ್‌ ಮತ್ತು ಚನ್ನಮ್ಮ ನಗರದಲ್ಲಿ ದಾಳಿ ನಡೆಸಿದ ಸಿಇಎನ್‌ ಅಪರಾಧ ಠಾಣೆ ಪೊಲೀಸರು, ಮಾದಕ ಪದಾರ್ಥ ಅಫೀಮನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ.

‘ಪಾನ್‌ ಶಾಪ್‌ ಇಟ್ಟುಕೊಂಡಿದ್ದ ತಾಲ್ಲೂಕಿನ ಜೋಗಾನಟ್ಟಿ ಗ್ರಾಮದ ಬರಖತ್‌ಖಾನ್ ವಿಲ್ಲಾಖಾನ್ (30), ಚನ್ನಮ್ಮ ನಗರದ ಸರವನ್ ಅಲಿಯಾಸ್ ಸಾವರಾರಾಮ (21) ಹಾಗೂ ಹುಬ್ಬಳ್ಳಿಯ ಮೊರಾರ್ಜಿ ನಗರದ ಗೋಕುಲ ರಸ್ತೆಯ ಕಮಲೇಶ ಬೇನಿವಾ (25) ಬಂಧಿತರು. ಅವರಿಂದ 1 ಕೆ.ಜಿ. 15 ಗ್ರಾಂ. ತೂಕದ ಅಫೀಮು ವಶಪಡಿಸಿಕೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಬೆಲೆ ಸುಮಾರು ₹ 20 ಲಕ್ಷ ಆಗುತ್ತದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್‌ ಪತ್ರಕರ್ತರಿಗೆ ತಿಳಿಸಿದರು.

‘ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ. ಸಿಇಎನ್ ಠಾಣೆ ಇನ್‌ಸ್ಪೆಕ್ಟರ್ ಬಿ.ಆರ್. ಗಡ್ಡೇಕರ, ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ. ಈ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.