ADVERTISEMENT

ಝೂ ತಲುಪಿದ ಮೂರು ಸಿಂಹಗಳು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 11:57 IST
Last Updated 25 ಫೆಬ್ರುವರಿ 2021, 11:57 IST

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ಮೃಗಾಲಯಕ್ಕೆ ಮೂರು ಸಿಂಹಗಳನ್ನು ತರಿಸಲಾಗಿದೆ.

ಬನ್ನೇರಘಟ್ಟ ಜೈವಿಕ ಉದ್ಯಾನದಿಂದ ಬುಧವಾರ ರಾತ್ರಿ ಅವುಗಳನ್ನು ಇಲ್ಲಿಗೆ ಸುರಕ್ಷಿತವಾಗಿ ಸಾಗಿಸಲಾಗಿದೆ. ‘ನಕುಲ’, ‘ಕೃಷ್ಣ’ ಹಾಗೂ ‘ನಿರುಪಮಾ’ ಹೆಸರಿನ ಈ ಸಿಂಹಗಳು 2010ರ ಫೆ.12ರಂದು ‘ಪ್ರೇಕ್ಷಾ’–‘ಗಣೇಶ’ ಜೋಡಿಗೆ ಜನಿಸಿದವಾಗಿವೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ಟ್ವೀಟ್ ಮಾಡಿದೆ.

‘ಮೂರು ಸಿಂಹಗಳನ್ನು ಶೀಘ್ರವೇ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು. ಇದು ಹೆಚ್ಚಿನ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ’ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.