ADVERTISEMENT

ಬೆಳಗಾವಿ: ಮತ್ತೆ ಮೂರು ಪ್ರಕರಣಗಳು ನೆಗೆಟಿವ್‌– ಡಿ.ಸಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 13:44 IST
Last Updated 27 ಮಾರ್ಚ್ 2020, 13:44 IST

ಬೆಳಗಾವಿ: ‘ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿವೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

ಪ್ರಕಟಣೆ ನೀಡಿರುವ ಅವರು, ‘ಇನ್ನೊಂದು ಮಾದರಿಯ ವರದಿ ಇನ್ನಷ್ಟೇ ಬರಬೇಕು’ ಎಂದು‌ ಹೇಳಿದ್ದಾರೆ.

‘ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿರುತ್ತವೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ಹದಿನೈದು ಮಾದರಿಗಳ ಪೈಕಿ ಇದೀಗ ಹದಿನಾಲ್ಕು ನೆಗೆಟಿವ್ ಬಂದಿವೆ. ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕೋರಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.