ADVERTISEMENT

ವಿಶ್ವವಿದ್ಯಾಲಯಗಳ ಗುಣಮಟ್ಟ ಮೌಲ್ಯಮಾಪನ | ಆರ್‌ಸಿಯುಗೆ ‘3 ಸ್ಟಾರ್’ ರೇಟಿಂಗ್

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 12:21 IST
Last Updated 18 ಸೆಪ್ಟೆಂಬರ್ 2019, 12:21 IST
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆರ್‌ಸಿಯು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮತ್ತು ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಅವರಿಗೆ ಪ್ರಮಾಣಪತ್ರ ವಿತರಿಸಿದರು
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆರ್‌ಸಿಯು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮತ್ತು ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಅವರಿಗೆ ಪ್ರಮಾಣಪತ್ರ ವಿತರಿಸಿದರು   

ಬೆಳಗಾವಿ: ಉನ್ನತ ಶಿಕ್ಷಣ ಪರಿಷತ್ ನಡೆಸಿದ ವಿಶ್ವವಿದ್ಯಾಲಯಗಳ ಗುಣಮಟ್ಟ ಮೌಲ್ಯಮಾಪನ ಸಮೀಕ್ಷೆಯಲ್ಲಿ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು (ಆರ್‌ಸಿಯು) ‘3 ಸ್ಟಾರ್’ ರೇಟಿಂಗ್‌ ಪಡೆದಿದೆ.

5ರಿಂದ 10 ವರ್ಷಗಳ ತರುಣ ವಿಶ್ವವಿದ್ಯಾಲಯಗಳ ಪಠ್ಯಕ್ರಮದ ಗುಣಮಟ್ಟ, ಮಾನವ ಸಂಪನ್ಮೂಲ ಮತ್ತು ಭೌತಿಕ ಸಂಪನ್ಮೂಲದಲ್ಲಿ ಆರ್‌ಸಿಯು ಮೊದಲ 10 ವಿಶ್ವವಿದ್ಯಾಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ಮಂಗಳವಾರ ಪ್ರಮಾಣಪತ್ರ ಪ್ರದಾನ ಮಾಡಿದರು. ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಹಾಗೂ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT