ADVERTISEMENT

2ನೇ ಹಂತ: 307 ನಾಮಪತ್ರ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 15:07 IST
Last Updated 18 ಡಿಸೆಂಬರ್ 2020, 15:07 IST

ಬೆಳಗಾವಿ: ಜಿಲ್ಲೆಯಲ್ಲಿ 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಕೆಯಾಗಿದ್ದ 13,943 ನಾಮಪತ್ರಗಳ ಪೈಕಿ 307 ನಾಮಪತ್ರಗಳು ತಿರಸ್ಕೃತವಾಗಿವೆ. 13,636 ಉಮೇದುವಾರಿಕೆಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಸವದತ್ತಿ, ರಾಮದುರ್ಗ, ಚಿಕ್ಕೋಡಿ, ನಿಪ್ಪಾಣಿ, ಅಥಣಿ, ಕಾಗವಾಡ ಹಾಗೂ ರಾಯಬಾಗ ತಾಲ್ಲೂಕುಗಳ 218 ಗ್ರಾಮ ಪಂಚಾಯಿತಿಗಳ 3,936 ಗ್ರಾಮ ಪಂಚಾಯಿತಿಗಳಿಗೆ ಡಿ. 27ರಂದು ಮತದಾನ ನಡೆಯಲಿದೆ. 24‌ ಸ್ಥಾನಗಳು ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.

ಸವದತ್ತಿ–96, ರಾಮದುರ್ಗ–26, ಚಿಕ್ಕೋಡಿ–42, ನಿಪ್ಪಾಣಿ–35, ಅಥಣಿ–68, ಕಾಗವಾಡ–21, ರಾಯಬಾಗ ತಾಲ್ಲೂಕಿನಲ್ಲಿ 9 ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ವಾಪಸ್ ಪಡೆಯಲು ಶನಿವಾರದವರೆಗೂ ಅವಕಾಶವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.