ADVERTISEMENT

ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 16:59 IST
Last Updated 19 ಆಗಸ್ಟ್ 2020, 16:59 IST

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.

267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.