
ಕಾಗವಾಡ: ಮತಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ವೀಶೇಷ ಅನುದಾನದಡಿ ₹50 ಕೋಟಿ ಮಂಜೂರಾಗಿದ್ದು ಅದರಲ್ಲಿ ಲೊಕೋಪಯೋಗಿ ಇಲಾಖೆ ₹37.5 ಕೋಟಿ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗೆ ₹12.5 ಕೋಟಿ ಗ್ರಾಮೀಣ ಪ್ರದೇಶದ ಹಲವು ರಸ್ತೆ ಕಾಮಗಾರಿಗಳನ್ನು ಮಾಡಲು ಮಂಜೂರಾಗಿವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ತಾಲ್ಲೂಕಿನ ಶಿರಗುಪ್ಪಿ,ಉಗಾರ,ಐನಾಪೂರ, ಮೋಳೆ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಏಪ್ರಿಲ್ ತಿಂಗಳಲ್ಲಿ ಕೃಷ್ಣಾ ನದಿಯ ನೀರು ಬರಿದಾಗುವ ಸಾಧ್ಯತೆ ಇದೆ. ಮಾರ್ಚ್‌ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಗಮನಕ್ಕೆ ತಂದು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ವಿಜಯ ಅಕಿವಾಟೆ, ಅಮೂಲ ಸರಡೆ, ವಿನೋದ ಕೋಳೆಕರ,ಶಂಕರ ಮಗದುಮ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಜಯ ಬಿರಡಿ, ಪ್ರವೀಣ ಗಾಣಿಗೇರ, ಅರುಣ ಗಾಣಿಗೇರ, ಸುರೇಶ ಗಾಣಿಗೇರ, ಪಾಯಪ್ಪ ಕುಡವಕ್ಕಲಗಿ, ಅರವಿಂದ ಕಾರ್ಚಿ, ಪ್ರಕಾಶ ಕೋರ್ಬು, ಸಿದ್ದಪ್ಪ ಕನಾಳೆ, ಅಶೋಕ ಹುಗ್ಗಿ, ರಾಜು ಕನಾಳೆ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.