ADVERTISEMENT

ದೇವಸ್ಥಾನ ಜೀರ್ಣೋದ್ಧಾರ, ಯಾತ್ರಿ ನಿವಾಸಕ್ಕೆ ₹ 50 ಲಕ್ಷ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 15:31 IST
Last Updated 8 ಸೆಪ್ಟೆಂಬರ್ 2020, 15:31 IST
ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಗ್ರಾಮ ದೇವಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು
ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಗ್ರಾಮ ದೇವಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು   

ಬೆಳಗಾವಿ: ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಗ್ರಾಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಭೂಸೇನಾ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಮೆರವಣಿಗೆ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.

‘ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳ ಜೀರ್ಣೋದ್ಧಾರ ಕಾರ್ಯವನ್ನು ಎಲ್ಲರೂ ಕೂಡಿ ಮಾಡಬೇಕಿದೆ’ ಎಂದು ಲಕ್ಷ್ಮಿ ಹೇಳಿದರು.

ADVERTISEMENT

‘ಈಗಿನ ಯುವಜನರು ದೇವಸ್ಥಾನಗಳಿಗೆ ಹೋಗುವುದು ಕಡಿಮೆಯಾಗಿದೆ. ಅವರಲ್ಲಿ ಒಳ್ಳೆಯ ಸಂಸ್ಕಾರ ಹಾಗೂ ಅಧ್ಯಾತ್ಮದ ವಿಷಯಗಳನ್ನು ಬಿತ್ತಬೇಕು. ಇದರಿಂದ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ’ ಎಂದರು.

ಮುಖಂಡರಾದ ಸಿ.ಸಿ. ಪಾಟೀಲ, ಸುರೇಶ ಇಟಗಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮದುಭರಮಣ್ಣವರ, ರಾಮನಗೌಡ ಪಾಟೀಲ, ಸಿದ್ದಪ್ಪ ಚಾಪಗಾಂವ, ಪಡೆಪ್ಪ ಅರಳಿಕಟ್ಟಿ, ಅರ್ಜುನ ಅರ್ಜುನವಾಡಿ, ಪ್ರಕಾಶ ಬೆಳಗಾವಿ, ಸೋಮನಗೌಡ ಪಾಟೀಲ, ವಿಠ್ಠಲ ಅರ್ಜುನವಾಡಿ, ರಾಮಪ್ಪ ಕೊಳೆಪ್ಪನವರ, ಶಂಕರ ಚಾಪಗಾಂವ, ರಾಮಪ್ಪ ಶೀಗಿಹಳ್ಳಿ ಇದ್ದರು.

ಹಲಗಾ–ಬಸ್ತವಾಡ: ₹ 90 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಹಲಗಾ-ಬಸ್ತವಾಡ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಶಾಸಕರು ಸೋಮವಾರ ಚಾಲನೆ ನೀಡಿದರು.

‘ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಡೀ ಕ್ಷೇತ್ರ ಅಭಿವೃದ್ಧಿ ಆಗಬೇಕು ಮತ್ತು ಜನರ ಸಂಕಷ್ಟ ದೂರವಾಗಬೇಕು ಎನ್ನುವುದಷ್ಟೆ ನನ್ನ ಗುರಿ. ಹಿಂದಿದ್ದವರು ಏಕೆ ಮಾಡಿಲ್ಲ ಎನ್ನುವುದನ್ನೆಲ್ಲ ಕೆದಕುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.